News Karnataka Kannada
Wednesday, April 17 2024
Cricket
ಕರಾವಳಿ

ಸಮುದ್ರದಲ್ಲಿ ಸಿಲುಕಿದ್ದ ಮೂವರು ಮೀನುಗಾರರ ರಕ್ಷಣೆ

Photo Credit :

ಸಮುದ್ರದಲ್ಲಿ ಸಿಲುಕಿದ್ದ ಮೂವರು ಮೀನುಗಾರರ ರಕ್ಷಣೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ‘ತೌಕ್ತೆ’ ಚಂಡಮಾರುತದ ಪರಿಣಾಮದಿಂದ ಕರಾವಳಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬಿರುಸಿನ ಮಳೆ ಸುರಿಯುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನತೆ ತೊಂದರೆ ಅನುಭವಿಸುವಂತಾಯಿತು.ವಾರಾಂತ್ಯ ಕರ್ಪ್ಯೂ ತೆರವುಗೊಳಿಸಿದ್ದರಿಂದ ಕಾರ್ಮಿಕರು ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಸಿದ್ಧರಾಗಿದ್ದರೂ ಮಳೆಯಿಂದಾಗಿ ಹೊರಗೆ ಹೋಗದಂತಾಗಿದೆ. ಅಗತ್ಯ ವಸ್ತುಗಳ ಖರೀದಿಸಲಾಗದೆ ಜನರು ತತ್ತರಿಸಿದರು. ಜಿಲ್ಲೆಯ ನಗರ ಮತ್ತು ಗ್ರಾಮಾಂತರದಲ್ಲಿ ಭಾರಿ ಮಳೆಯಾಗಿದ್ದು, ಉಳ್ಳಾಲ ಸೇರಿದಂತೆ ಹಲವೆಡೆ ಕಡಲು ಪ್ರಕ್ಷುಬ್ಧವಾಗಿದೆ. ಅಲೆಗಳ ಆರ್ಭಟ ಹೆಚ್ಚಾಗಿದ್ದು, ಸಮುದ್ರ ತೀರದ ಜನರು ಆತಂಕ ಎದುರಿಸುವಂತಾಗಿದೆ.
ಎಂಜಿನ್‌ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿದ್ದ ಮೀನುಗಾರಿಕೆ ದೋಣಿಯ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ. ಕಣ್ಣೂರಿನಿಂದ 10 ನಾಟಿಕಲ್‌ ಮೈಲಿ ದೂರದಲ್ಲಿ ಬೋಟ್‌ ಕೆಟ್ಟು ನಿಂತಿತ್ತು. ಮಾಹಿತಿ ಪಡೆದ ಕರಾವಳಿ ಕಾವಲು ಪಡೆ ಸಿಬ್ಬಂದಿ, ವಿಕ್ರಮ್‌ ಹಡಗಿನೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಮೂವರನ್ನು ರಕ್ಷಿಸಲಾಗಿದ್ದು, ಅವರಿಗೆ ಆಹಾರ, ವೈದ್ಯಕೀಯ ನೆರವು ನೀಡಲಾಗಿದೆ ಎಂದು ಕರಾವಳಿ ಕಾವಲು ಪಡೆದ ಕಮಾಂಡರ್‌ ವೆಂಕಟೇಶ್‌ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು