News Karnataka Kannada
Tuesday, April 16 2024
Cricket
ಕರಾವಳಿ

ಸುಳ್ಯದಲ್ಲಿ 74 ನೇ ಸ್ವಾತಂತ್ರ್ಯೋತ್ಸವ: ಕೊರೋನಾ ವಾರಿಯರ್ಸ್‍ಗಳಿಗೆ ಸನ್ಮಾನ

Photo Credit :

ಸುಳ್ಯದಲ್ಲಿ 74 ನೇ ಸ್ವಾತಂತ್ರ್ಯೋತ್ಸವ: ಕೊರೋನಾ ವಾರಿಯರ್ಸ್‍ಗಳಿಗೆ ಸನ್ಮಾನ

ಸುಳ್ಯ: ಯಾವುದೇ ಸಮಸ್ಯೆ, ಸವಾಲುಗಳು ಬಂದರೂ ಅದನ್ನು ಎದುರಿಸುವ ಶಕ್ತಿ ದೇಶಕ್ಕಿದೆ. ಸವಾಲುಗಳನ್ನು ಎದುರಿಸಲು ಸರ್ಕಾರದ ಜೊತೆ ಜನತೆಯೂ ಕೈ ಜೋಡಿಸಬೇಕು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿಯ  ಆಶ್ರಯದಲ್ಲಿ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾದ ವಿರುದ್ಧ ಹೋರಾಟ ನಡೆಸಿದ ಕೊರೋನಾ ವಾರಿಯರ್ಸ್‍ಗಳಿಗೆ ನಮಿಸುವುದಾಗಿ ಅವರು ಹೇಳಿದರು.

ಸುಳ್ಯ ತಹಶೀಲ್ದಾರ್ ಅನಂತಶಂಕರ್ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಿದರು. ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ  ಪುಷ್ಪಾ ಮೇದಪ್ಪ, ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಕ.ಸಾ.ಪ. ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ಸುಳ್ಯ ಸರ್ಕಲ್ ಇನ್‍ಸ್ಪೆಕ್ಟರ್ ನವೀನ್ ಚಂದ್ರ ಜೋಗಿ, ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಗೃಹರಕ್ಷಕದಳದ ಅಧಿಕಾರಿ ಜಯಂತ್ ಶೆಟ್ಟಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇಗೌಡ ವೇದಿಕೆಯಲ್ಲಿದ್ದರು.

ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ ವಂದಿಸಿದರು. ಕ್ಷೇತ್ರ ಶಿಕ್ಷಣ ಸಂಯೋಜಕ ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.

ಕೊರೋನಾ ವಾರಿಯರ್ಸ್‍ಗಳಾಗಿ ಸೇವೆ ಸಲ್ಲಿಸಿದವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.  ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೆ ಟಾಪರ್ ಆದ ಅನುಷ್ ಎ.ಎಲ್.ರನ್ನು ಅಭಿನಂದಿಸಲಾಯಿತು. ತಾ.ಪಂ ಸದಸ್ಯರು, ನಗರ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು