News Karnataka Kannada
Saturday, April 13 2024
Cricket
ಕರಾವಳಿ

ಹನಿ ಹನಿ ನೀರು ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ವೀರೇಂದ್ರ ಹೆಗ್ಗಡೆ

Photo Credit :

ಹನಿ ಹನಿ ನೀರು ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಹನಿ ಹನಿ ನೀರನ್ನು ರಕ್ಷಿಸಿವುದು ನಮ್ಮೆಲ್ಲರ ಜವಾಬ್ದಾರಿ. ಆದರೆ ಎಷ್ಟೇ ಎಚ್ಚರಿಕೆ ವಹಿಸಿದರೂ ಒಂದಷ್ಟು ಪ್ರಮಾಣದ ನೀರು ವ್ಯರ್ಥವಾಗಿ ಹರಿದು ಹೋಗುತ್ತದೆ. ಇದನ್ನು ತಡೆಗಟ್ಟಲು ತಂತ್ರಜ್ಞಾನದ ಬಳಕೆ ಅನಿವಾರ್ಯ. ಜಲಸಂರಕ್ಷಣೆಯ ಅನೇಕ ಉಪಕರಣಗಳು ಮಾರುಕಟ್ಟೆಯಲ್ಲಿ ಈಗಾಗಲೇ ದೊರಕುತಿದ್ದರೂ, ಕಡಿಮೆ ದರದಲ್ಲಿ ಪರಿಣಾಮಕಾರಿಯಾದ ಯಂತ್ರಗಳ ಲಭ್ಯತೆ ಇಲ್ಲದಿರುವುದು ಜಲಸಂರಕ್ಷಣೆ ಕಾರ್ಯಕ್ಕೆ ಹಿನ್ನಡೆ ಉಂಟುಮಾಡಿದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿಯ ರೋಟರಿ ಕ್ಲಬ್ ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ತನ್ನ ಜಲ ಸಂರಕ್ಷಣಾ ಅಭಿಯಾನದ ಪ್ರಯುಕ್ತ ಸುಮಾರು 100ರಷ್ಟು ಈ ಉಪಕರಣಗಳನ್ನು ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಸಹಭಾಗಿತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳಿಗೆ ಆದ್ಯತೆಯ ಮೇರೆ ವಿತರಿಸುವ ಯೋಜನೆ ಹಮ್ಮಿಕೊಂಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿ,’ಜಲರಕ್ಷಕ ‘ ಉಪಕರಣವನ್ನು ಬಿಡುಗಡೆ ಮಾಡಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು, ರೋಟರಿಯ ಜಲಸಂರಕ್ಷಣಾ ಕಾರ್ಯವು ಶ್ಲಾಘನೀಯ. ಜನಸಾಮಾನ್ಯರು ಮಾತ್ರವಲ್ಲದೆ ಪಂಚಾಯತ್ ಗಳು ಕೂಡ ಇಂತಹ ವಿಧಾನಗಳ ಬಳಕೆಗೆ ಉತ್ತೇಜನ ನೀಡಬೇಕು ಎಂದು ಹೇಳಿದರು.

ಎಸ್. ಡಿ. ಎಂ. ಪಾಲಿಟೆಕ್ನಿಕ್ ಪ್ರಾಚಾರ್ಯರು ಮತ್ತು ಉಪನ್ಯಾಸಕರು ತಯಾರಿಸಿದ ಉಪಕರಣದ ಕಾರ್ಯದಕ್ಷತೆ ಕುರಿತು ಅವರು ಮೆಚ್ಚುಗೆ ವ್ಯಕ್ತಪಡಿಸಿದರು ಪ್ರಥಮ ಉಪಕರಣವನ್ನು ನಿಡ್ಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಅವರಿಗೆ ಹಸ್ತಾಂತರಿಸಲಾಯಿತು ಜಲಸಂರಕ್ಷಣೆಯಲ್ಲಿ ಪಾಲ್ಗೊಳ್ಳಲು ಮನಸ್ಸಿರುವ ಗ್ರಾಮ ಪಂಚಾಯತ್ ಸದಸ್ಯರು ,ಸರ್ಕಾರಿ ಸಂಸ್ಥೆಗಳು ರೋಟರಿ ಅಧ್ಯಕ್ಷರು ಅಥವಾ ಪಾಲಿಟೆಕ್ನಿಕ್ ಪ್ರಾಚಾರ್ಯರನ್ನು ಸಂಪರ್ಕಿಸಬಹುದು . ಆದ್ಯತೆಯ ಮೇಲೆ ವಿತರಿಸಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು