News Karnataka Kannada
Tuesday, April 23 2024
Cricket
ಕರಾವಳಿ

ಹನ್ನೆರಡನೇ ದಿನಕ್ಕೆ ತಲುಪಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಪ್ರತಿಭಟನೆ

Photo Credit :

ಹನ್ನೆರಡನೇ ದಿನಕ್ಕೆ ತಲುಪಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಪ್ರತಿಭಟನೆ

ಬಂಟ್ವಾಳ: ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಳೆದ 12 ದಿನಗಳಿಂದ ಕೆಲಸಕ್ಕೆ ಹಾಜರಾಗದೆ ಮುಷ್ಕರ ನಡೆಸುತ್ತಿದ್ದು, ಸೋಮವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ತಮ್ಮ ಬೇಡಿಕೆಗೆ ಸ್ಪಂದನೆ ನೀಡದ ಸರಕಾರದ ವಿರುದ್ಧ ಮೌನಪ್ರಾರ್ಥನೆ ಮೂಲಕ ಪ್ರತಿಭಟಿಸಿದರು.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘವು ಭಾರತೀಯ ಮಜ್ದೂರ್ ಸಂಘ(ಬಿಎಂಎಸ್)ದ ಸಹಯೋಗದೊಂದಿಗೆ ಸೆ. 24ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಸೋಮವಾರವೂ ಮುಷ್ಕರ ಮುಂದುವರಿದಿತ್ತು. ವೈದ್ಯಾಧಿಕಾರಿಗಳು ಸೇರಿದಂತೆ ಬಂಟ್ವಾಳ ತಾಲೂಕಿನಲ್ಲಿ ಒಟ್ಟು 120 ಮಂದಿ ಗುತ್ತಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ.

ಪ್ರತಿಭಟನಾಕಾರರನ್ನುಉದ್ದೇಶಿಸಿ ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ ಮಾತನಾಡಿ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಬೇಡಿಕೆ ನ್ಯಾಯಯುತವಾಗಿದ್ದು, ರಾಜ್ಯ ಸರಕಾರ ಅದಕ್ಕೆ ಸ್ಪಂದನೆ ನೀಡುವ ಭರವಸೆ ಇದೆ. ಪ್ರಸ್ತುತ ಸರಕಾರದಲ್ಲಿ ಸಚಿವರುಗಳು ಉತ್ತಮ ಕೆಲಸ ಮಾಡುತ್ತಿದ್ದು, ಅವರು ಕೇಂದ್ರದೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಸುವ ವಿಶ್ವಾಸವಿದೆ. ಮುಂದೆ ಜಿ.ಪಂ.ಸಭೆಯಲ್ಲೂ ತಾನು ಈ ಬಗ್ಗೆ ವಿಷಯ ಪ್ರಸ್ತಾಪಿಸಿ ಇವರಿಗೆ ನ್ಯಾಯ ದೊರಕಿಸಿಕೊಡಲು ಪ್ರಯತ್ನಿಸಲಿದ್ದೇನೆ ಎಂದರು.

ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ ಅವರು ಕೂಡ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಗುತ್ತಿಗೆ ನೌಕರರ ಸಂಘದ ತಾಲೂಕು ಅಧ್ಯಕ್ಷ ಡಾ. ಪ್ರಕಾಶ್‌ಕುಮಾರ್, ಕಾರ್ಯದರ್ಶಿ ವಿಶ್ವನಾಥ ಪಿ. ಹಾಗೂ ಇತರ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು