News Karnataka Kannada
Friday, April 12 2024
Cricket
ಕರಾವಳಿ

ಹಾಥರಸ್ ಘಟನೆ ಖಂಡಿಸಿ ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Photo Credit :

ಹಾಥರಸ್ ಘಟನೆ ಖಂಡಿಸಿ ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಸುಳ್ಯ: ಉತ್ತರ ಪ್ರದೇಶದ ಹಾಥರಸ್ ಎಂಬಲ್ಲಿ ದಲಿತ ಯುವತಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆಯನ್ನು ಖಂಡಿಸಿ,  ಘಟನೆಯನ್ನು ಉತ್ತರ ಪ್ರದೇಶ ಸರ್ಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಜೆಡಿಎಸ್ ಸೇರಿ ವಿವಿಧ ರಾಜಕೀಯ ಪಕ್ಷಗಳ ಮತ್ತು ತಾಲೂಕಿನ ದಲಿತ ಪರ ಸಂಘಟನೆಗಳು ಹಾಗು ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ಪ್ರತಿಭಟನೆ ಹಾಗು ಜೈಲ್ ಭರೋ ಚಳುವಳಿ ಹಮ್ಮಿಕೊಳ್ಳಲಾಯಿತು. ಹಳೆಗೇಟಿನಿಂದ ಆರಂಭಗೊಂಡು ಗಾಂಧಿನಗರದವರೆಗೆ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆದು ಬಸ್ ನಿಲ್ದಾಣದ ಬಳಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಬಳಿಕ ರಸ್ತೆ ತಡೆ ನಡೆಸಲಾಯಿತು.

ಮಾಜಿ ಸಚಿವ ಯು.ಟಿ.ಖಾದರ್, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಕರ್ನಾಟಕ ರಾಜ್ಯ ಕಾರ್ಮಿಕರ ಫೆಡರೇಶನ್‍ನ ಗೌರವಾಧ್ಯಕ್ಷ ಕೆ.ಪಿ.ಜಾನಿ, ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ ಪಂಜ, ಕೆಪಿಸಿಸಿ ಮಾಜಿ ಸದಸ್ಯ ಡಾ.ಬಿ.ರಘು ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಜೆಡಿಎಸ್ ತಾಲೂಕು ಅಧ್ಯಕ್ಷ ದಯಾಕರ ಆಳ್ವ, ಕಾಂಗ್ರೆಸ್ ಮುಖಂಡರಾದ ಭರತ್ ಮುಂಡೋಡಿ, ಎಂ.ವೆಂಕಪ್ಪ ಗೌಡ, ಧನಂಜಯ ಅಡ್ಪಂಗಾಯ ಮತ್ತಿತರರು ನೇತೃತ್ವ ವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು