Categories: ಕರಾವಳಿ

ಅಂತರ್ ರಾಜ್ಯ ವಿದ್ಯುತ್ ಲೈನ್ ಸರ್ವೇ: ನಿಡ್ಡೋಡಿ ಗ್ರಾಮಸ್ಥರಿಂದ ವಿರೋಧ

ಮೂಡುಬಿದಿರೆ: ಇಲ್ಲಿಗೆ ಸಮೀಪದ ನಿಡ್ಡೋಡಿ ಕೊಲತ್ತಾರು ಪದವು ಎಂಬಲ್ಲಿ ವಿದ್ಯುತ್ ಲೈನ್ ಅಳವಡಿಕೆ ಸರ್ವೇಗಾಗಿ ಸ್ಟೇರ್‍ಲೈಟ್ ಕಂಪೆನಿ ಹೆಸರು ಹೇಳಿಕೊಂಡು ಬಂದಿದ್ದ ಬೆಂಗಳೂರು ಮೂಲದ ಕಂಪೆನಿಯವರನ್ನು ಹಿಮ್ಮೆಟ್ಟಿಸಿದ ಘಟನೆ ಭಾನುವಾರ ನಡೆದಿದೆ.

ಮೆಗಾ ವಿದ್ಯುತ್ ಯೋಜನೆಗೆಂದು ನಿಗದಿಯಾಗಿ ಸ್ಥಳೀಯ ಜನತೆಯ ತೀವ್ರ ವಿರೋಧದ ಬಳಿಕ ಹಿನ್ನಡೆಯಾಗಿದ್ದ ಈ ಸ್ಥಳದಲ್ಲಿ ಸ್ಥಳೀಯ ಪಂಚಾಯತ್‍ಗೆ ಮಾಹಿತಿ ನೀಡದೇ ಸರ್ವೇಗಾಗಿ ಆಗಮಿಸಿದ್ದವರನ್ನು ಮಾತೃಭೂಮಿ ಸಂರಕ್ಷಣಾ ಸಮಿತಿಯವರು ತಡೆದು ನಿಲ್ಲಿಸಿದಾಗ ಸಮರ್ಪಕ ಮಾಹಿತಿ ನೀಡಲಿಲ್ಲ.

ಸರ್ವೇ ಹೆಸರಿನಲ್ಲಿ ಆಗಮಿಸುತ್ತಿರುವ ಯಾರಿಗೇ ಆಗಲಿ ಅವಕಾಶ ನೀಡುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದಾಗ ಆಗಮಿಸಿದ್ದ ಸರ್ವೇ ತಂಡದವರು ಮರಳಿದರು. ಈ ಬಗ್ಗೆ ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಮಾತೃಭೂಮಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಲ್ಪೋನ್ಸ್ ಡಿ’ಸೋಜ, ಸಂಚಾಲಕ ಕಿರಣ್ ಮಂಜನಬೈಲು, ಸದಸ್ಯರಾದ ಜನಾರ್ದನ ಗೌಡ, ಅರುಣ ಎಂ.ಆರ್., ರಾಮ ಗೌಡ, ಪುರುಷೋತ್ತಮ ಗೌಡ ಮೊದಲಾದವರು ಸೇರಿದಂತೆ ಸುಮಾರು 100 ಮಂದಿ ಸ್ಥಳದಲ್ಲಿದ್ದರು.

Desk

Recent Posts

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

8 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

23 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

45 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

2 hours ago