News Karnataka Kannada
Tuesday, May 07 2024
ಕರಾವಳಿ

ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ– ಸುಪ್ರೀಂಗೆ ಕೇಂದ್ರ ಮನವರಿಕೆ: ಶೋಭಾ

Shobha 21082021
Photo Credit :

ಪುತ್ತೂರು: ‘ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂಬ ಅಂಶವನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿದೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡಿಕೆ ಬೆಳೆಗೆ ಬಾಧಿಸುತ್ತಿರುವ ಹಳದಿ ರೋಗದ ನಿವಾರಣೆಗೆ ವಿಶೇಷ ಪ್ರಯತ್ನಗಳನ್ನು ಮಾಡಲಾಗುತ್ತದೆ ಎಂದರು.

‘ತೆಂಗಿನಕಾಯಿ ಮತ್ತು ಅದರ ಮೌಲ್ಯವರ್ಧಿತ ಉತ್ಪನ್ನಗಳಿಗೆ ಕೇಂದ್ರ ಪ್ರೋತ್ಸಾಹ ನೀಡುತ್ತಿದೆ. ತೆಂಗಿನ ಉತ್ಪನ್ನಗಳ ರಫ್ತಿಗೆ ಇರುವ ನಿಷೇಧವನ್ನು ತೆರವುಗೊಳಿಸಿ, ತೆಂಗು ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ’ ಎಂದರು.

‘ಕೃಷಿ ಆಧಾರಿತ ದೇಶವಾದ ಭಾರತದಲ್ಲಿ ಆಹಾರ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ. ಈ ದಿಸೆಯಲ್ಲಿ ಹಡೀಲು ಭೂಮಿಯಲ್ಲಿ ಕೃಷಿ ನಡೆಸಲು ಉತ್ತೇಜಿಸುವ ಕಾರ್ಯ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಅನುಷ್ಠಾನಗೊಳಿಸಲು ಚಿಂತನೆ ನಡೆಸಲಾಗಿದೆ’ ಎಂದು ತಿಳಿಸಿದರು.‌

ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಮುಖಂಡ ಚನಿಲ ತಿಮ್ಮಪ್ಪ ಶೆಟ್ಟಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು