Categories: ಕರಾವಳಿ

ಅನಧಿಕೃತ ಕಟ್ಟಡಗಳ ಬಗ್ಗೆ ಸುಳ್ಯ ಕೆಡಿಪಿ ಸಭೆಯಲ್ಲಿ ಚರ್ಚೆ

ಸುಳ್ಯ: ಸುಳ್ಯ ತಾಲೂಕು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಶಾಸಕ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ತಾ.ಪಂ.ಸಭಾಂಗಣದಲ್ಲಿ ನಡೆಯಿತು.

ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಸುಳ್ಯ ನಗರ ವ್ಯಾಪ್ತಿಯಲ್ಲಿ ನದಿ ಪೊರಂಬೋಕು ಸ್ಥಳದಲ್ಲಿ ಅನಧಿಕೃತ ಕಟ್ಟಡಗಳು ಕಟ್ಟಿರುವುದರ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಶಾಸಕರು ಪ್ರಶ್ನಿಸಿದರು. ಅನಧಿಕೃತ ಕಟ್ಟಡಗಳಿಗೆ ನೋಟಿಸ್ ನೀಡಲಾಗಿದೆ ಎಂದು ನಗರ ಪಂಚಾಯಿತಿ ಅಧಿಕಾರಿ ಸಭೆಗೆ ತಿಳಿಸಿದರು. ಈ ಕುರಿತು ಕಂದಾಯ, ಲೋಕೋಪಯೋಗಿ ಇಲಾಖೆ ಮತ್ತು ನ.ಪಂ.ಜಂಟಿಯಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು ಎಂದು ಶಾಸಕರು ಸೂಚಿಸಿದರು.

ಸಾಲಮನ್ನಾ ಸೇರಿದತೆ ಎಲ್ಲಾ ಸರ್ಕಾರಿ ಯೋಜನೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಆಗಿದೆ. ಆದರೆ ತಾಲೂಕಿನಲ್ಲಿ ಆಧಾರ್ ಕಾರ್ಡ್ ದೊರೆಯಲು ಸಮಸ್ಯೆ ಇದೆ ಎಂದು ಜಿ.ಪಂ.ಸದಸ್ಯ ಎಸ್.ಎನ್.ಮನ್ಮಥ ಹೇಳಿದರು. ಆಧಾರ್ ಕಾರ್ಡ್ ಎಲ್ಲರಿಗೂ ದೊರಕುವಂತೆ ಮಾಡಲು ಕ್ರಮ ಕೈಗೊಳ್ಳುವಂತೆ ಶಾಸಕರು ಕಂದಾಯ ಇಲಾಖೆಗೆ ಸೂಚಿಸಿದರು.

ಅಜ್ಜಾವರ ಗ್ರಾಮದಲ್ಲಿ ರಾತೋ ರಾತ್ರಿ ಮದ್ಯದಂಗಡಿ ತೆರದಿರುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಗ್ರಾಮ ಪಂಚಾಯಿತಿಯಿಂದ ಕ್ಯಾಟರಿಂಗ್ ಸರ್ವೀಸ್‍ಗೆ ಅಂತ ಪರವಾನಗಿ ನೀಡಿದ್ದಾರೆ. ಮದ್ಯದಂಗಡಿ ತೆರೆದಿರುವುದಕ್ಕೆ ಪಂಚಾಯಿತಿ ವತಿಯಿಂದ ಮತ್ತು ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ ಎಂದು ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಹೇಳಿದರು. ಈ ಕುರಿತು ಚರ್ಚೆ ನಡೆದು ಅಧಿಕಾರಿಗಳಿಂದ ಶಾಸಕರು ಮಾಹಿತಿ ಪಡೆದರು. ಸಾರ್ವಜನಿಕರ ವಿರೋಧ ಉಂಟಾದ ಹಿನ್ನೆಲೆಯಲ್ಲಿ ಮದ್ಯದಂಗಡಿಗೆ ನೀಡಿರುವ ಪರವಾನಗಿಯನ್ನು ರದ್ದು ಪಡಿಸುವಂತೆ ಮೇಲಧಿಕಾರಿಗಳಿಗೆ ಬರೆಯಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಆನೆ ಹಾವಳಿ ತಡೆಯಲು ಆನೆ ಕಂದಕಗಳ ನಿರ್ಮಾಣ ಕಾರ್ಯವನ್ನು ಮುಂದುವರಿಸಲಾಗುತ್ತಿದ್ದು ಈ ವರ್ಷ ಸುಳ್ಯ, ಸುಬ್ರಹ್ಮಣ್ಯ, ಪಂಜ ವಲಯಗಳಲ್ಲಿ ಒಟ್ಟು 17 ಕಿ.ಮಿ. ಆನೆ ಕಂದಕ ನಿರ್ಮಿಸಲಾಗುವುದು. ಅಲ್ಲದೆ ಕಂದಕ ನಿರ್ಮಿಸಲಾಗದ ಕಡೆಗಳಲ್ಲಿ ಆನೆಗಳು ದಾಟದಂತೆ ಕಾಂಕ್ರೀಟ್ ಫಿಲ್ಲರ್ಸ್‍ಗಳನ್ನು ನಿರ್ಮಿಸಲಾಗುವುದು. ಸುಳ್ಯ ವಲಯದಲ್ಲಿ 13 ಕಡೆಗಳಲ್ಲಿ 150 ಮೀ. ಈ ರೀತಿಯಲ್ಲಿ ಕಾಂಕ್ರೀಟ್ ಫಿಲ್ಲರ್‍ ಗಳನ್ನು ಅಳವಡಿಸುವ ಯೋಜನೆ ಇದೆ ತಾಲೂಕಿನಲ್ಲಿ ಒಟ್ಟು 250 ಮೀ. ಕಾಂಕ್ರೀಟ್ ಫಿಲ್ಲರ್‍ ಗಳ ನಿರ್ಮಾಣ ನಡೆಯಲಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

Desk

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

4 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

46 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

49 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago