ಉಡುಪಿ: ಕಾಪು ಬಳಿ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಪಡುಬಿದ್ರಿ ಕಾಡಿಪಟ್ನ ನಿವಾಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ವೇಳೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ-ಮಂಗಳೂರು ರಸ್ತೆಯಲ್ಲಿ ಮಲ್ಪೆಯಿಂದ ಪಡುಬಿದ್ರಿಯತ್ತ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಕಾಲಿನ ಭಾಗಕ್ಕೆ ಗಾಂಭೀರವಾಗಿ ಗಾಯಗೊಂಡಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿಯವರ ಸಹಕಾರದಿಂದ ಮಣಿಪಾಲದ ಖಾಸಗಿ ಆಸ್ಪತೆಗೆ ಸಾಗಿಸಲಾಗಿದೆ.