Categories: ಕರಾವಳಿ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಇದು ಸಕಾಲ: ಪೇಜಾವರ ಶ್ರೀ

ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಇದು ಸೂಕ್ತ ಸಮಯವೆಂದು ಪೇಜಾವರ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉಡುಪಿಯಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಕೈಜೋಡಿಸುವಂತೆ ಬೃಹತ್‌ ಜನಜಾಗೃತಿ ಸಭೆಯಲ್ಲಿ ಮಾತನಾಡಿದ ಶ್ರೀಗಳು, ಸಮಸ್ಯೆ ಬಗೆಹರಿಸಲು ಮೂರು ಮಾರ್ಗಗಳಿವೆ. ಸಂಯುಕ್ತ ಅಧಿವೇಶನದ ಮೂಲಕ ಸಮಸ್ಯೆ ಬಗೆಹರಿಸಬಹುದು. ಲೋಕಸಭೆ- ರಾಜ್ಯಸಭೆ ಅಧಿವೇಶನದಲ್ಲಿ ತೀರ್ಮಾನಿಸಬಹುದು. ಮಂದಿರ ವಿಚಾರದಲ್ಲಿ ಕೇಂದ್ರ ಸರ್ಕಾರ ಸುಗ್ರಿವಾಜ್ಞೆಯನ್ನು ಹೊರಡಿಸಲಿ ಎಂದರು.

ಸುಪ್ರೀಂಕೋರ್ಟ್ ಬೇಗನೆ ಆದೇಶ ಹೊರಡಿಸಲಿ. ಒಂದು ವರ್ಷದ ಒಳಗೆ ರಾಮಮಂದಿರ ಆಗಬೇಕು. ಸುಪ್ರೀಂಕೋರ್ಟ್ ಜನಾಭಿಪ್ರಾಯದಂತೆ ಶೀಘ್ರ ತೀರ್ಮಾನಿಸಲಿ. ಎಲ್ಲದಕ್ಕೂ ನ್ಯಾಯಾಲಯವನ್ನು ‌ಕಾಯುವುದಕ್ಕೆ ಸಾಧ್ಯವಿಲ್ಲ ಎಂದರು. ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳಲಿ. ದೃಢ ನಿರ್ಧಾರ ಕೇಂದ್ರ ಸರ್ಕಾರಕ್ಕೂ ಅನುಕೂಲವಾಗಲಿದೆ. ಮೋದಿ ಸರ್ಕಾರಕ್ಕೆ ಸಂಪೂರ್ಣ ಬಹುಮತವಿದೆ ಎಂದು ಶ್ರೀಗಳು ಹೇಳಿದರು.

ಚುನಾವಣೆ ಹತ್ತಿರ ಇರುವುದರಿಂದ ಯಾರು ವಿರೋಧ ಮಾಡಲಿಕ್ಕಿಲ್ಲ. ವಿರೋಧ ಮಾಡುವ ಧೈರ್ಯ ಯಾರಿಗೂ ಇಲ್ಲ. ಕಾಂಗ್ರೆಸ್ ತಟಸ್ಥವಾಗಿ ಎಲ್ಲವನ್ನೂ ನೋಡುತ್ತಿದೆ. ಕಾಂಗ್ರೆಸ್ ಬೆಂಬಲಿಸುವ ಅಥವಾ ವಿರೋಧಿಸಲೂ ಹೋಗುತ್ತಿಲ್ಲ. ಮಂದಿರ ನಿರ್ಮಾಣಕ್ಕೆ ಈಗ ಅನುಕೂಲವಾದ ವಾತಾವರಣವಿದೆ ಎಂದ ಶ್ರೀಗಳು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ವಿರೋಧಿಸಿದರೆ ಪಕ್ಷಕ್ಕೆ ಪ್ರತಿಕೂಲ ಆಗಬಹುದು. ರಾಮಮಂದಿರ ಭಾವನಾತ್ಮಕ ವಿಚಾರ. ನಾಲ್ಕೂವರೆ ವರ್ಷ ಆಯ್ತು ಇನ್ನು ಮಂದಿರ ಆಗಿಲ್ಲ. ನಾವು ಕಾದಿದ್ದೇವೆ.. ಈಗ ಒತ್ತಾಯ ಮಾಡುತ್ತಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ನಾವು ಚರ್ಚೆ ಮಾಡುತ್ತಿಲ್ಲ ಎಂದರು.

ಸಂತರಿಗೆ ಚುನಾವಣೆಯ ಯಾವುದೇ ಅಗತ್ಯವಿಲ್ಲ.‌ ಚುನಾವಣೆ ನಂತರ ಮುಂದೇನು ಎಂಬ ಪರಿಸ್ಥಿತಿ ಗೊತ್ತಿಲ್ಲ. ಈಗಲೇ ಮಂದಿರ ನಿರ್ಮಾಣ ಮಾಡಿ ಎಂದು ಶ್ರೀಗಳು ಸರ್ಕಾರಕ್ಕೆ ಆಗ್ರಹಿಸಿದರು.

Desk

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

5 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

8 mins ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

12 mins ago

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

21 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

32 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

33 mins ago