News Karnataka Kannada
Sunday, May 19 2024
ಕರಾವಳಿ

ಅಲಂಗಾರು: ಬಸ್ ಡಿಕ್ಕಿ-ನಿವೃತ್ತ ಶಿಕ್ಷಕ ಸಾವು

Photo Credit :

ಅಲಂಗಾರು: ಬಸ್ ಡಿಕ್ಕಿ-ನಿವೃತ್ತ ಶಿಕ್ಷಕ ಸಾವು

ಮೂಡುಬಿದಿರೆ: ರಸ್ತೆ ದಾಟುತ್ತಿದ್ದ ವೇಳೆ ಕೆಎಸ್‍ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ನಿವೃತ್ತ ಶಿಕ್ಷಕ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟ ಘಟನೆ ಅಲಂಗಾರು ಜಂಕ್ಷನ್‍ನಲ್ಲಿ  ನಡೆದಿದೆ.

ಅಲಂಗಾರು ಸಮೀಪದ ಕಾನದ ನಿವಾಸಿ, ನಿವೃತ್ತ ಶಿಕ್ಷಕ ಕೃಷ್ಣ ಭಟ್(81) ಮೃತಪಟ್ಟವರು. ಅವರು ಬುಧವಾರ ಮಧ್ಯಾಹ್ನ ವೇಳೆಗೆ ಅಲಂಗಾರು ಜಂಕ್ಷನ್‍ನಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ, ಕಾರ್ಕಳ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದಾರೆ.

ಕೃಷ್ಣ ಭಟ್ ಅವರು ಅಜೆಕಾರು, ಸಾಗರ, ಕಾನದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

193
Deevith S K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು