Categories: ಕರಾವಳಿ

ಅಸಾನಿ ಚಂಡಮಾರುತ: ಹಲವೆಡೆ ವಿಮಾನ ಹಾಗೂ ರೈಲು ಸಂಚಾರ ರದ್ದು

ಮಂಗಳೂರು: ಅಸಾನಿ ಚಂಡಮಾರುತದಿಂದಾಗಿ ಕರಾವಳಿ ರಾಜ್ಯಗಳು ತತ್ತರಿಸಿವೆ. ಭಾರೀ ಗಾಳಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಅಸಾನಿ ಚಂಡಮಾರುತ ವಿಮಾನ ನಿಲ್ದಾಣದ ಕಾರ್ಯಾಚರಣೆಗಳ ಮೇಲೆ ತೀವ್ರ ಪ್ರಭಾವ ಬೀರಿದೆ.

ಈಗಾಗಲೇ ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ವಿಮಾನಗಳ ಮಾರ್ಗ ಬದಲಾವಣೆಯಾಗಿದೆ. ಮಂಗಳವಾರದವರೆಗೆ 19 ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿತ್ತು.

ಬುಧವಾರ, ಇಂಡಿಗೋ ಸಂಸ್ಥೆ 23 ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ದೆಹಲಿ-ವಿಶಾಖಪಟ್ಟಣಂ, ಬೆಂಗಳೂರು-ವಿಶಾಖಪಟ್ಟಣಂ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಏರ್ ಇಂಡಿಯಾ ಮುಂಬೈ-ರಾಯಪುರ ಮತ್ತು ವಿಶಾಖಪಟ್ಟಣ-ದೆಹಲಿ ಸೇವೆಗಳನ್ನು ರದ್ದುಗೊಳಿಸಿದೆ. ವಿಮಾನಗಳು ಲ್ಯಾಂಡಿಂಗ್‌ ಆಗಲು ಪ್ರತಿಕೂಲ ಹವಾಮಾನ ಕಾರಣ ಎಂದು ಏರ್‌ಪೋರ್ಟ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ದಕ್ಷಿಣ ಮಧ್ಯ ರೈಲ್ವೆ ಬುಧವಾರ ಒಟ್ಟು 37 ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವನ್ನು ರಿಷೆಡ್ಯೂಲ್‌ ಮಾಡಲಾಗಿದೆ. ವಿಜಯವಾಡ-ಮಚಿಲಿಪಟ್ಟಣಂ, ಮಚಿಲಿಪಟ್ಟಣಂ-ವಿಜಯವಾಡ, ವಿಜಯವಾಡ-ನರಸಾಪುರ, ನರಸಾಪುರ-ನಿಡದವೋಲು, ನಿಡದವೋಲು-ನರಸಾಪುರ, ನರಸಾಪುರ-ವಿಜಯವಾಡ, ವಿಜಯವಾಡ-ನರಸಾಪುರ, ನಿಡದವೋಲು-ಭೀಮಾವರಂ ಜಂಕ್ಷನ್, ಭೀಮಾವರಂ ಜಂಕ್ಷನ್- ಮಚಲಿಪಟ್ಟಣಂ-ಗುಡಿವಾಡ, ಭೀಮಾವರಂ ಜಂಕ್ಷನ್-ಮಚಿಲಿಪಟ್ಟಣಂ, ಗುಡಿವಾಡ-ಮಚಿಲಿಪಟ್ಟಣಂ, ನರಸಾಪುರ-ಗುಂಟೂರು, ಗುಂಟೂರು-ನರಸಾಪುರ, ಕಾಕಿನಾಡ ಬಂದರು-ವಿಜಯವಾಡ ರೈಲುಗಳು ರದ್ದಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ.

Sneha Gowda

Recent Posts

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

8 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

35 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

48 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

1 hour ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

1 hour ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

1 hour ago