Categories: ಕರಾವಳಿ

ಆಗಸ್ಟ್‌ 1ರಂದು ಕೊಂಕಣಿ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ಪ್ರಶಸ್ತಿ ಪ್ರದಾನ

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ‘ಗೌರವ ಪ್ರಶಸ್ತಿ’ ಹಾಗೂ ‘ಪುಸ್ತಕ ಬಹುಮಾನ’ ಪ್ರದಾನ ಸಮಾರಂಭ ಆಗಸ್ಟ್‌ 1ರಂದು ಮಧ್ಯಾಹ್ನ 2 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ.ಕೆ. ಜಗದೀಶ್ ಪೈ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅರುಣ್ ಸುಬ್ರಾವ್ ಉಭಯಕರ್ (ಸಾಹಿತ್ಯ), ಪುತ್ತೂರು ಪಾಂಡುರಂಗ ನಾಯಕ್ (ಕಲೆ), ಲಕ್ಷ್ಮಿ ಕೃಷ್ಣ ಸಿದ್ದಿ (ಜಾನಪದ) ಅವರಿಗೆ ಅಕಾಡೆಮಿ ‘ಗೌರವ ಪ್ರಶಸ್ತಿ’ ಮತ್ತು ಪ್ರೇಮ್ ಮೊರಾಸ್ ಅವರ ಕವನ-ಏಕ್‌ಮೂಟ್ ಪಾವ್ಳ್ಯೊ’, ಮೋನಿಕಾ ಡೇಸಾ ಅವರ ಸಣ್ಣಕತೆ ‘ನವಿದಿಶಾ’, ಸ್ಟೀವನ್ ಕ್ವಾಡ್ರಸ್ ಅವರ ಲೇಖನ ‘ಸುಗಂದು ಸ್ವಾಸ್‌’ಗೆ ‘ಪುಸ್ತಕ ಬಹುಮಾನ’ ನೀಡಿ ಗೌರವಿಸಲಾಗುವುದು ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಕೊಂಕಣಿ ನಟ ಹೆನ್ರಿ ಡಿಸಿಲ್ವಾ ಪಾಲ್ಗೊಳ್ಳುವರು ಎಂದು ಹೇಳಿದರು.

‘ಕೊಂಕಣಿ ಭಾಷೆಗೆ ಸಾಂವಿಧಾನಿಕ ಮಾನ್ಯತೆ ದೊರೆತ ದಿನವಾದ ಆ.20ರಂದು ಕೊಂಕಣಿ ಮಾನ್ಯತಾ ದಿನಾಚರಣೆ ಆಯೋಜಿಸಲಾಗಿದೆ. ಕುಮಟಾ, ಹುಬ್ಬಳ್ಳಿ, ಕಾರವಾರ, ದಾವಣಗೆರೆ, ಬೆಂಗಳೂರು ಮತ್ತು ಮಂಗಳೂರು ಸೇರಿ ಆರು ಕಡೆಗಳಲ್ಲಿ ಸರಳವಾಗಿ ಕಾರ್ಯಕ್ರಮ ಜರುಗಲಿದೆ. ಮಂಗಳೂರಿನ ಸೇಂಟ್‌ ಅಲೋಶಿಯಸ್ ಕಾಲೇಜು ಸಹಯೋಗದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದರು.

ಅಕಾಡೆಮಿಯ ರಿಜಿಸ್ಟ್ರಾರ್ ಆರ್. ಮೋಹನ್ ಕಾಮತ್, ಸದಸ್ಯರಾದ ಕೆನ್ಯುಟ್ ಜೀವನ್, ನವೀನ್ ನಾಯಕ್, ಅರುಣ್ ಜಿ.ಶೇಟ್ ಇದ್ದರು.

Sampriya YK

Recent Posts

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

17 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

35 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

51 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago