News Karnataka Kannada
Wednesday, May 08 2024
ಕರಾವಳಿ

ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಆರಂಭ

Photo Credit :

ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಆರಂಭ

ಸುಳ್ಯ: ಗ್ರಾಮ ವಿಕಾಸ ಸಮಿತಿ ಮಂಗಳೂರು, ವಿವೇಕಾನಂದ ವಿಧ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ  ಜಾಲ್ಸೂರು, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ಪ್ರಾರಂಭಗೊಂಡಿತು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ  ಶಿಬಿರವನ್ನು ಉದ್ಘಾಟಿಸಿದರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸುಳ್ಯ ತಾಲೂಕು ಸಂಘಚಾಲಕ ಚಂದ್ರಶೇಖರ ತಳೂರು, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಮಕೃಷ್ಣ ರೈ, ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ಗ್ರಾಮ ವಿಕಾಸ ಸಮಿತಿ ತಾಲೂಕು ಸಂಯೋಜಕ ವಿನೋದ್ ಬೊಳ್ಮಲೆ ಉಪಸ್ಥಿತರಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಭಾರತ ಸಹಸೇವಾ ಪ್ರಮುಖ್ ನ.ಸೀತಾರಾಮ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸುರೇಶ್ ಕಣೆಮರಡ್ಕ ಕಾರ್ಯಕ್ರಮ ನಿರೂಪಿಸಿದರು.

ತರಬೇತಿ ಶಿಬಿರ 16ರವರೆಗೆ ನಡೆಯಲಿದೆ. ಶಿಬಿರದಲ್ಲಿ ಕೃಷಿ ಯಂತ್ರೋಪಕರಣಗಳ ದುರಸ್ತಿ, ವಿದ್ಯುತ್ ಉಪಕರಣಗಳ ದುರಸ್ತಿ(ಗ್ಯಾಸ್ ಸ್ಟೌವ್, ಗ್ಯಾಸ್ ಗೀಝರ್ ಸಹಿತ), ಪ್ಲಂಬಿಂಗ್, ಇಲೆಕ್ಟ್ರೀಷಿಯನ್, ಫ್ಯಾಷನ್ ಡಿಸೈನಿಂಗ್, ಪುಡ್ ಟೆಕ್ನಾಲಜಿ, ಕೃಷಿ ಕಸಿ ಕಟ್ಟುವುದು, ಜೇನು ಕೃಷಿ, ಹೈನುಗಾರಿಕೆ, ಕೋಳಿ ಸಾಕಾಣೆ, ಆಡು ಸಾಕಾಣೆ, ಮೊಬೈಲ್ ಫೋನ್ ದುರಸ್ತಿಯ ಬಗ್ಗೆ  ತರಬೇತಿ ನಡೆಯುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು