News Karnataka Kannada
Sunday, May 19 2024
ಕರಾವಳಿ

ಇಂದಿನಿಂದ ಏಪ್ರಿಲ್ 20 ರವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ಕರ್ಫ್ಯೂ

Photo Credit :

ಇಂದಿನಿಂದ ಏಪ್ರಿಲ್ 20 ರವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ಕರ್ಫ್ಯೂ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆ ಉಲ್ಬಣವಾಗಿದೆ. ನಿಯಂತ್ರಣ ಕಾರ್ಯ ಅವಶ್ಯಕವಾಗಿರುವುದರಿಂದ ರಾಜ್ಯ ಸರ್ಕಾರವು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏ. 10 ರಿಂದ 20 ರ ವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ಮುಂದಿನ ಆದೇಶದವರೆಗೆ ಕೊರೊನಾ ಕರ್ಫ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಸಂದರ್ಭದಲ್ಲಿ ಕೆಳಕಂಡ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿ, ಉಳಿದಂತೆ ಎಲ್ಲಾ ಸೇವೆಗಳನ್ನು, ಸಂಚಾರಗಳನ್ನು ನಿಷೇಧಿಸಿ ಈ ಕೆಳಕಂಡಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿರುತ್ತಾರೆ.
ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹಎಲ್ಲಾ ಕಾರ್ಖಾನೆಗಳು/ಕಂಪನಿಗಳು /ಸಂಸ್ಥೆಗಳು ಯಥಾ ರೀತಿಯಲ್ಲಿ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಆದರೆ ಸಂಬಂಧಿಸಿದ ಕಾರ್ಮಿಕರು /ನೌಕರರು ಕರ್ಫ್ಯೂ ಅವಧಿಗೆ ಮುನ್ನವೇಕರ್ತವ್ಯದಲ್ಲಿ ಹಾಜರಿರಬೇಕು. ದೂರಸಂಪರ್ಕ ಮತ್ತು ಅಂತರ್ಜಾಲ ಸೇವಾ ಸಂಸ್ಥೆಗಳು ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳ ಸಿಬ್ಬಂದಿಗಳು ರಾತ್ರಿ ಪಾಳಿಯಲ್ಲಿ ಅಧಿಕೃತ ಕಚೇರಿ ಗುರುತಿನ ಚೀಟಿ ಹೊಂದಿ ಸಂಚರಿಸಲು ಅನುಮತಿ ನೀಡಲಾಗಿದೆ.
ವೈದ್ಯಕೀಯ ಸೇವೆ ಮತ್ತು ತುರ್ತುಚಟುವಟಿಕೆಗೆ ಮಾತ್ರ ಅನುಮತಿ ನೀಡಲಾಗಿದ್ದು, ಇನ್ನುಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು, ಸರಕು ಸಾಗಣಿಕೆ ವಾಹನಗಳು, ಹೋಮ್‍ಡೆಲಿವರಿ, ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರಅನುಮತಿ ನೀಡಲಾಗಿದೆ. ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದದೂರ ಪ್ರಯಾಣಕ್ಕೆ ಅನುಮತಿ ನೀಡಲಾಗಿದ್ದು, ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್‍ಗಳ ಆಧಾರದ ಮೇಲೆ ಆಟೋ/ ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಬಹುದು.ಮೇಲಿನ ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ವಿಪತ್ತು ನಿರ್ವಹಣಾಕಾಯ್ದೆ 2005, ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು