News Karnataka Kannada
Tuesday, April 30 2024
ಮಂಗಳೂರು

ಉದನೆ ಗಣಪತಿ ಕಟ್ಟೆಯನ್ನು‌ ಹಾನಿಗೊಳಿಸಿದ ವ್ಯಕ್ತಿಯ ಬಂಧನ

Criminal
Photo Credit :

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉದನೆ ಎಂಬಲ್ಲಿರುವ ಗಣಪತಿ ಕಟ್ಟೆಯನ್ನು ಕಲ್ಲು ಎತ್ತಿ ಹಾಕಿ ಹಾನಿಗೊಳಿಸಿರುವ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರದ ಬಾಗಲ್ ಪುರ ಜಿಲ್ಲೆಯ ಗೋಪಾಲ್ ಪುರ್ ತಾಲೂಕಿನ ಗರ್ನಿಯಾ ನಿವಾಸಿ ರವೀಂದ್ರ ಕುಮಾರ್, ಎಂದು ಗುರುತಿಸಲಾಗಿದೆ. ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶುಕ್ರವಾರದಂದು ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿದ್ದು, ರಾತ್ರಿ ವೇಳೆ ಆರೋಪಿಯು ಬಾಳೆಗಿಡಗಳನ್ನು ಕಿತ್ತೆಸೆದು ಕಲ್ಲು ಎತ್ತಿಹಾಕಿ ಮೆಟ್ಟಿಲನ್ನು ಹಾನಿಗೊಳಿಸಿರುವುದು ಕಂಡುಬಂದಿತ್ತು. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಘಟನೆ ನಡೆದು 24 ಗಂಟೆಗಳ ಅವಧಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು