News Karnataka Kannada
Wednesday, May 08 2024
ಕರಾವಳಿ

ಉದ್ಯೋಗ ನೈಪುಣ್ಯ ಶಿಬಿರ ದಾರಿದೀಪ: ಕೋಟ ಶ್ರೀನಿವಾಸ ಪೂಜಾರಿ

Photo Credit :

ಉದ್ಯೋಗ ನೈಪುಣ್ಯ ಶಿಬಿರ ದಾರಿದೀಪ: ಕೋಟ ಶ್ರೀನಿವಾಸ ಪೂಜಾರಿ

ಸುಳ್ಯ: ವಿವಿಧ ರೀತಿ ಉದ್ಯೋಗ ಅಥವಾ ಸ್ವತಃ ಕೃಷಿ ಮಾಡಿ ತನ್ನ ಕಾಲ ಮೇಲೆ ನಿಲ್ಲಲು ಮತ್ತು ಅತ್ಮ ಸ್ಥೆರ್ಯದಿಂದ ಬದುಕು ಸಾಗಿಸಲು ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಸಹಾಯಕವಾಗಲಿದೆ. ನಾವು ಯಾವ ರೀತಿ ಕೆಲಸ ಮಾಡಬೇಕು ಮತ್ತು ಹೇಗೆ ಬದುಕು ಕಟ್ಟಿಕೋಳ್ಳಬೇಕು ಎಂದು ತಿಳಿಯಲು ತರಬೇತಿ ಶಿಬಿರ ದಾರಿ ದೀಪವಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಗ್ರಾಮ ವಿಕಾಸ ಸಮಿತಿ ಮಂಗಳೂರು, ವಿವೇಕಾನಂದ ವಿದ್ಯಾವರ್ದಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ ಜಿಲ್ಲೆ ಹಾಗೂ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇದರ ಸಹಯೋಗದಲ್ಲಿ  ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭದ  ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಗೋಸೇವಾ ಪ್ರಮುಖ್ ಪ್ರವೀಣ್ ಸರಳಾಯ, ಸುಳ್ಯ ತಾಲೂಕು ಸಂಘ ಚಾಲಕ  ಚಂದ್ರಶೇಖರ ತಳೂರು, ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ, ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ಸಂಚಾಲಕ ಕೆ.ಆರ್.ಗಂಗಾಧರ, ಗ್ರಾಮ ವಿಕಾಸ ಸಮಿತಿಯ ಜಿಲ್ಲಾ ಸಂಯೋಜಕ ವಿನೋದ್ ಬೋಳ್ಮಲೆ, ಸಹಕಾರಿ ಭಾರತಿ ಸುಳ್ಯ ತಾಲೂಕು ಅಧ್ಯಕ್ಷ  ಪ್ರವೀಣ್ ರಾವ್, ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್, ಅರಂತೋಡು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಮುಖ್ಯ ಶಿಕ್ಷಕ ಸೀತಾರಾಮ ಉಪಸ್ಥಿತರಿದ್ದರು. ಸುಳ್ಯ ಎಪಿಎಂಸಿ ಮಾಜಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಸ್ವಾಗತಿಸಿ, ಉಮಾಶಂಕರ್ ವಂದಿಸಿದರು. ಎನ್.ಜಯಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು