ಮಂಗಳೂರು: ಭಾನುವಾರ ತಡರಾತ್ರಿ ಕಿಡಿಗೇಡಿಗಳು ಮೀನಿನ ಅಂಗಡಿಗೆ ಬೆಂಕಿ ಹಚ್ಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸುಬ್ರಹ್ಮಣ್ಯ ಕ್ರಾಸ್ ಬಳಿ ನಡೆದಿದೆ.
ಅಶೋಕ್ ಶೆಟ್ಟಿ ಎಂಬವರಿಗೆ ಸೇರಿದ ಮೀನಿನ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮೀನು ಸಂಗ್ರಹದ ಬಾಕ್ಸ್ ಸೇರಿದಂತೆ ಅಂಗಡಿ ಸಂಪೂರ್ಣವಾಗಿ ಭಸ್ಮವಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಶೋಕ್ ಹಿಂದೂ ಪರ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸೋಮವಾರ ಬೆಳಿಗ್ಗೆ ಆಗಮಿಸಿ, ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಜೊತೆಗೆ ಘಟನಾ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.