ಮಂಗಳೂರು

‘ಔಟ್‍ಲುಕ್’ ನಿಯತಕಾಲಿಕೆಯ ಸಮೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮ. ಕಾಲೇಜಿನ ವಿವಿಧ ವಿಭಾಗಗಳಿಗೆ ಮನ್ನಣೆ

ಬೆಳ್ತಂಗಡಿ : ರಾಷ್ಟ್ರಮಟ್ಟದ ಜನಪ್ರಿಯ ನಿಯತಕಾಲಿಕೆ ‘ಔಟ್‍ಲುಕ್’ ಇತ್ತೀಚೆಗೆ ನಡೆಸಿದ ರಾಷ್ಟ್ರಮಟ್ಟದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮ. ಕಾಲೇಜಿನ ವಿವಿಧ ವಿಭಾಗಗಳಿಗೆ ಉತ್ಕøಷ್ಟ ಮನ್ನಣೆ ಲಭ್ಯವಾಗಿದೆ.

ಸಮೀಕ್ಷೆಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗಕ್ಕೆ ರಾಷ್ಟ್ರಮಟ್ಟದಲ್ಲಿ 18ನೇ ಸ್ಥಾನ ಲಭ್ಯವಾಗಿದ್ದು, ಬಿಸಿಎಗೆ 17 ಸ್ಥಾನ, ಸಮಾಜ ಕಾರ್ಯ ವಿಭಾಗಕ್ಕೆ 22ನೇ ಸ್ಥಾನ ಪ್ರಾಪ್ತವಾಗಿದೆ. ಬಿ.ಬಿ.ಎ ವಿಭಾಗಕ್ಕೆ 34, ವಿಜ್ಞಾನ ವಿಭಾಗಕ್ಕೆ 47, ಕಲಾ ವಿಭಾಗಕ್ಕೆ 66 ಹಾಗೂ ವಾಣಿಜ್ಯ ವಿಭಾಗಕ್ಕೆ ರಾಷ್ಟ್ರಮಟ್ಟದಲ್ಲಿ 88ನೇ ಸ್ಥಾನದ ಹಿರಿಮೆ ಪ್ರಾಪ್ತವಾಗಿದೆ.

ಸಮೀಕ್ಷೆಗಾಗಿ ಪತ್ರಿಕೆಯು ಕಾಲೇಜಿನ ವಿವಿಧ ವಿಭಾಗಗಳ ಶೈಕ್ಷಣಿಕ ಚಟುವಟಿಕೆ, ಸಾಧನೆ ಹಾಗೂ ಪಡೆದ ಮನ್ನಣೆಗಳು, ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ, ಪರೀಕ್ಷಾ ಫಲಿತಾಂಶ, ಶುಲ್ಕ ವಿವರ, ಲಭ್ಯವಿರುವ ಸೌಲಭ್ಯಗಳು ಹಾಗೂ ಕಾಲೇಜಿನಲ್ಲಿರುವ ವಿದ್ಯಾರ್ಥಿಗಳ ಶೈಕ್ಷಣಿಕ, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಇರುವ ಸೌಲಭ್ಯಗಳು ಹಾಗೂ ಕ್ರೀಡೆ, ಸಾಂಸ್ಕøತಿಕ, ಸಾಹಿತ್ಯಕ ಚಟುವಟಿಕೆಗಳಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಪಡೆದ ಪ್ರಶಸ್ತಿಗಳು, ಸಂಶೋಧನಾ ಚಟುವಟಿಕೆಗಳು ಮುಂತಾಗಿ ಸಮಗ್ರ ವಿವರಗಳನ್ನ ಕಲೆಹಾಕಿ ಅತ್ಯುತ್ತಮ ಕಾಲೇಜುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

2021ರ ಆಗಸ್ಟ್ ತಿಂಗಳ ಸಂಚಿಕೆಯಲ್ಲಿ ಸಮೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಿರುವ ‘ಔಟ್‍ಲುಕ್’ ಅತ್ಯುತ್ತಮ ಕಾಲೇಜುಗಳ ಆಯ್ಕೆಯ ಮಾನದಂಡ ಮತ್ತು ಪ್ರಕ್ರಿಯೆಯ ಸಮಗ್ರ ವಿವರಗಳನ್ನು ಪ್ರಸ್ತಾಪಿಸಿದೆ. ಉಜಿರೆ ಕಾಲೇಜಿನ ಈ ಸಾಧನೆಯ ಬಗ್ಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ವೀರೇಂದ್ರ ಹೆಗ್ಗಡೆ, ಕಾರ್ಯದರ್ಶಿಗಳಾದ ಹರ್ಷೇಂದ್ರಕುಮಾರ್ ಹಾಗೂ ಡಾ.ಬಿ.ಯಶೋವರ್ಮ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ರಾಷ್ಟ್ರಮಟ್ಟದ ಇನ್ನೊಂದು ಪ್ರಸಿದ್ಧ ವಾರಪತ್ರಿಕೆ ‘ಇಂಡಿಯಾ ಟುಡೇ’ ನಡೆಸಿದ ರಾಷ್ಟ್ರಮಟ್ಟದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲೂ ಉಜಿರೆ ಧ.ಮ ಕಾಲೇಜು ಉತ್ಕøಷ್ಟ 100 ಕಾಲೇಜುಗಳ ಪಟ್ಟಿಯಲ್ಲಿ ಸ್ಥಾನ ಪಡೆದಿತ್ತು. ಆಡಳಿತ ಮಂಡಳಿಯ ಸೂಕ್ತ ಮಾರ್ಗದರ್ಶನ, ಪ್ರೋತ್ಸಾಹ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಯ ಸಾಂಘಿಕ ಪ್ರಯತ್ನ, ವಿದ್ಯಾರ್ಥಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯ ಅಂಶಗಳು ಈ ಮನ್ನಣೆ ಲಭಿಸಲು ಸಹಾಯಕವಾಗಿವೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಸತೀಶ್ಚಂದ್ರ ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Raksha Deshpande

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago