Categories: ಕರಾವಳಿ

ಕಡಲಕೆರೆಗೆ 20 ಸಾವಿರ ಮೀನುಮರಿಗಳ ಸೇರ್ಪಡೆ

ಮೂಡುಬಿದಿರೆ: ಅರಣ್ಯ ಇಲಾಖೆ, ರೋಟರಿ ಕ್ಲಬ್, ಮೂಡುಬಿದಿರೆ ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್ ಮತ್ತು ಮೀನುಗಾರಿಕಾ ಇಲಾಖೆ ಮಂಗಳೂರು ಇವುಗಳ ಸಹಯೋಗದೊಂದಿಗೆ ಕಡಲಕೆರೆಗೆ  20,000 ವಿವಿಧ ಜಾತಿಯ ಮೀನು ಮರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಸೋಮವಾರದಂದು ಸಮರ್ಪಿಸಿದರು.

ಅರಣ್ಯ ಇಲಾಖೆ, ರೋಟರಿ ಕ್ಲಬ್, ಮೂಡುಬಿದಿರೆ ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್ ಮತ್ತು ಮೀನುಗಾರಿಕಾ ಇಲಾಖೆ ಮಂಗಳೂರು ಇವುಗಳ ಸಹಯೋಗದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಕಾಟ್ಲಾ, ಕಾಮನ್ ಕಾರ್ಪ್ (ಗೌರಿ ಮೀನು), ಗ್ರಾಸ್ ಕಾರ್ಕ್ (ಹುಲ್ಲು ಗೆಂಡೆ ಮೀನು)ಗಳನ್ನು ಕೆರೆಗೆ ಸಮರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ, ರಾಜ್ಯ ಕ್ರಿಶ್ಚನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜೋಯ್ಲಸ್ ತಾಕೋಡೆ, ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಸದಸ್ಯ ಮಂಜುನಾಥ ರೈ, ಪುರಸಭಾ ಸದಸ್ಯರಾದ ಪಿ.ಕೆ.ಥೋಮಸ್, ನಾಗರಾಜ ಪೂಜಾರಿ, ಪ್ರಸಾದ್ ಕುಮಾರ್, ಸೌಮ್ಯ ಸಂದೀಪ್ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಡಾ.ಸುದೀಪ್, ಮೂಡುಬಿದಿರೆ ರೋಟರಿ ಕ್ಲಬ್  ಟೆಂಪಲ್ ಟೌನ್‍ನ ಅಧ್ಯಕ್ಷ ಬಿ.ಸೀತಾರಾಮ ಆಚಾರ್ಯ,  ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಪುರಸಭಾ ಮುಖ್ಯಾಧಿಕಾರಿ ಇಂದು ಎಂ., ಕೃಷಿ ವಿಜ್ಞಾನಿ ಡಾ.ಎಲ್.ಸಿ.ಸೋನ್ಸ್, ಹಿರಿಯ ವಕೀಲ ಕೆ.ಆರ್. ಪಂಡಿತ್, ಉಪವಲಯಾರಣ್ಯಾಧಿಕಾರಿಗಳಾದ ಮಂಜುನಾಥ ಗಾಣಿಗ, ಅಶ್ವಿತ್ ಗಟ್ಟಿ, ಪ್ರಿಯಾ ಇನ್ಲೇಂಡ್ ಫಿಶರಿಸ್ ಬೋಟ್ ಸ್ಪೋಟ್ಸ್ ನಿರ್ವಾಹಕ ಡಾ.ಎಂ.ಎಸ್.ನಝೀರ್  ಹಾಗೂ ಗಣ್ಯರು ಉಪಸ್ಥಿತರಿದ್ದರು.

Desk

Recent Posts

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

15 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

38 mins ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

55 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

60 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

1 hour ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

2 hours ago