Categories: ಕರಾವಳಿ

ಕನಕಮಜಲು: ಸಚಿವರೊಂದಿಗೆ ಗ್ರಾಮಸ್ಥರ ಸಂವಾದ ಕಾರ್ಯಕ್ರಮ

ಸುಳ್ಯ: ಕನಕಮಜಲು ಗ್ರಾಮ ಪಂಚಾಯತಿಗೆ 2019-20ನೇ ಸಾಲಿನ ನಾನಾಜಿ ದೇಶ್ ಮುಖ್ ಗೌರವ ಗ್ರಾಮಸಭಾ ಪುರಸ್ಕಾರ ದೊರೆತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರಿನಿವಾಸ ಪೂಜಾರಿ ಅವರೊಂದಿಗೆ ಗ್ರಾಮಸ್ಥರ ಸಂವಾದ ಕಾರ್ಯಕ್ರಮ ಕನಕಮಜಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ರೈತ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಗ್ರಾಮಾಭಿವೃದ್ಧಿಗೆ ಪೂರಕವಾಗಿ ಕೃಷಿ, ಪರಿಸರ, ಜಲಸಂರಕ್ಷಣೆ, ಆರೋಗ್ಯ, ಶಿಕ್ಷಣ, ಗ್ರಂಥಾಲಯ, ಸಾಂಸ್ಕೃತಿಕ, ಯುವಜನ ಮತ್ತು ಕ್ರೀಡೆ ಮತ್ತಿತರ ವಿವಿಧ ವಿಷಯಗಳ ಕುರಿತು ಸಂವಾದ ನಡೆಯಿತು. ಸಾರ್ವಜನಿಕರ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹಸೇವಾ ಪ್ರಮುಖ್ ನ.ಸೀತಾರಾಮ ಪ್ರಾಸ್ತಾವಿಕವಾಗಿ ಮಾತನಾಡಿ ನಾನಾಜಿ ದೇಶ್‍ಮುಖ್ ಅವರ ಪರಿಚಯ ಮಾಡಿದರು. ಶಾಸಕ ಎಸ್. ಅಂಗಾರ ವೇದಿಕೆಯಲ್ಲಿದ್ದರು.

ಈ ಸಂದರ್ಭದಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ, ಸ್ಕ್ಯಾಡ್ಸ್‍ನ ಮಾಜಿ ಅಧ್ಯಕ್ಷ ಜಯರಾಮ ರೈ, ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಮತ್ತಿತರರು ಉಪಸ್ಥಿತರಿದ್ದರು.

 

Desk

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

6 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

6 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

7 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago