Categories: ಕರಾವಳಿ

ಕನಪಾಲೆ ಮರದ ಕೆತ್ತೆಯ ಕಷಾಯ ಕುಡಿದು ಅಸ್ವಸ್ಥ

ಬಂಟ್ವಾಳ: ಹಾಲೆ ಮರದ ಕೆತ್ತೆಯೆಂದು ಭಾವಿಸಿ ಬೇರೊಂದು ಮರದ ಕೆತ್ತೆಯ ಕಷಾಯ ತಯಾರಿಸಿ ಸೇವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಅಸ್ವಸ್ಥಗೊಂಡ ಘಟನೆ ಪಂಜಿಕಲ್ಲು ಗ್ರಾಮದಲ್ಲಿ ನಡೆದಿದೆ.

ಇಲ್ಲಿಗೆ ಸಮೀಪದ ಕೇಲ್ದೋಡಿ ನಿವಾಸಿಗಳಾದ ವಸಂತ ಪೂಜಾರಿ (48) ಅವರ ಮಕ್ಕಳಾದ ಅಶ್ವಿತಾ(17) ಹಾಗೂ ಅನ್ವಿತಾ(15) ಅಸ್ವಸ್ಥಗೊಂಡವರು. ಆಟಿ ಅಮವಾಸ್ಯೆಯ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗಿನ ಜಾವ ವಸಂತ ಪೂಜಾರಿಯವರ ಪತ್ನಿ ಪುಷ್ಪಾ ಅವರು ಹಾಲೆ ಮರವೆಂದು ಭಾವಿಸಿ ಮನೆ ಹತ್ತಿರದ ಕನಪಾಲೆ ಎಂಬ ಮರದ ಕೆತ್ತೆಯನ್ನು ತಂದು ಮನೆಯಲ್ಲಿ ಕಷಾಯ ಮಾಡಿದ್ದರು. ಬಳಿಕ ತನ್ನ ಪತಿ ವಸಂತ ಪೂಜಾರಿಯವರಿಗೆ  ಮತ್ತು ಇಬ್ಬರು ಮಕ್ಕಳಿಗೆ ಕಷಾಯ ನೀಡಿದ್ದು, ಅವರು ಸೇವಿಸಿದ ತಕ್ಷಣವೇ ವಿಪರೀತ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದಾರೆ. ತಕ್ಷಣವೇ ಅವರನ್ನು  ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಘಟನೆ ಕುರಿತಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ಬಂದಿದ್ದು, ಅಸ್ವಸ್ಥ ಗೊಂಡವರಿಂದ ಮಾಹಿತಿ ಪಡೆದುಕೊಂಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಗ್ರಾಮಾಂತರ ಠಾಣಾಧಿಕಾರಿ ರಕ್ಷಿತ್ ಗೌಡ ತಿಳಿಸಿದ್ದಾರೆ.
ಸೂಕ್ತ ಚಿಕಿತ್ಸೆ- ಡಾ.ಕಿರಣ್

ಮೂವರಿಗೂ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದ್ದು,  ಅವರು ಕೆತ್ತೆ ತೆಗೆದಿರುವ ಮರದಲ್ಲಿ  ವಿಷಮಯ ಅಲ್ಲದಿರುವುದರಿಂದ ಭಾರೀ ಅನಾಹುತ ತಪ್ಪಿದೆ, ಆದರೆ ಆ ಮರದ ಒಗರು ಅವರ ದೇಹಸ್ಥಿತಿಯಲ್ಲಿ ಏರುಪೇರು ಮಾಡಿದೆ ಎಂದು ಆಸ್ಪತ್ರೆಯ ವೈದ್ಯರಾದ ಡಾ.ಕಿರಣ್  ತಿಳಿಸಿದ್ದಾರೆ.
 

Desk

Recent Posts

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

14 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

32 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

9 hours ago