Categories: ಕರಾವಳಿ

ಕರಾವಳಿಯ ಹಿರಿಯ ಕಾಂಗ್ರೆಸ್ ನಾಯಕ ಮೊಹಿದಿನ್ ವಿಧಿವಶ

ಮಂಗಳೂರು: ಕರಾವಳಿಯ ಹಿರಿಯ ಕಾಂಗ್ರೆಸ್ ನಾಯಕ ಬಿ.ಎ. ಮೊಹಿದಿನ್ ಅವರು ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂಧ ಬಳಲುತ್ತಿದ್ದ ೮೧ ವರ್ಷದ ಮೊಹಿದಿನ್ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆ ಬಳಿಕ ಚೇತರಿಸಿಕೊಂಡು ಬೆಂಗಳೂರಿಗೆ ಬಂದಿದ್ದ ಅವರು ಕಳೆದ ವಾರ ಮತ್ತೇ ಅನಾರೋಗ್ಯಕ್ಕೀಡಾದರು. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ೬ಕ್ಕೆ ನಿಧರಾಗಿದ್ದಾರೆ.

ಸರಳ ಸಜ್ಜನಿಕೆಗೆ ಹೆಸರುವಾಸಿಯಾಗಿದ್ದ ಮೊಹಿದಿನ್ ಅವರು ಪೇಜಾವರ ಎಂಬ ಕುಗ್ರಾಮದ ಅನಕ್ಷರಸ್ಥ ಮುಸ್ಲಿಂ ಕುಟುಂಬದಲ್ಲಿ ಹುಟ್ಟಿದರು. ತಮ್ಮ ಪ್ರಯತ್ನದಿಂದಲೇ ಕಾಂಗ್ರೆಸ್ ರಾಜಕೀಯದಲ್ಲಿ ಗುರುತಿಸಿ ರಾಜ್ಯದ ಉನ್ನತ ಶಿಕ್ಷಣ ಸಚಿವರ ಹುದ್ದೆಯನ್ನೂ ಒಂದು ಸಣ್ಣ ಕಪ್ಪು ಚುಕ್ಕೆಯೂ ಇಲ್ಲದಂತೆ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇನ್ನೂ ಮೊಹಿದಿನ್ ಅವರ ಆತ್ಮಕಥನ ‘ನನ್ನೊಳಗಿನ ನಾನು’ ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗುವುದಿತ್ತು.

ಮೊಹಿದಿನ್ ಅವರ ಪಾರ್ಥಿವ ಶರೀರವನ್ನು 8 ಗಂಟೆಗೆ ಬೆಂಗಳೂರಿನ ಸಂಜಯ ನಗರದಲ್ಲಿರುವ ನಿವಾಸಕ್ಕೆ ಕೊಂಡೊಯ್ಯಲಾಗಿದೆ.11 ಗಂಟೆಗೆ ಸಾರ್ವಜನಿಕರ ದರ್ಶನಕ್ಕೆ ಇಟ್ಟು ನಂತರ ಮಂಗಳೂರಿಗೆ ಕೊಂಡೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ.

ಸಿಎಂ ಕುಮಾರಸ್ವಾಮಿ ಸಂತಾಪ: ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಬಿ.ಎ. ಮೊಹಿದೀನ್ ಅವರ ನಿಧನ ಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ

Desk

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

25 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

41 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago