ಮಂಗಳೂರು/ಉಡುಪಿ: ಇಂದು (ಅ.31) ಬೆಳ್ಳಂಬೆಳಗ್ಗೆ ಕರಾವಳಿ ಭಾಗದಲ್ಲಿ ಐಟಿ ದಾಳಿಯಾಗಿದೆ. ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಕಳೆದ ದಿನವಷ್ಟೇ ಬೆಂಗಳೂರು, ಉಡುಪಿ, ಚಾಮರಾಜನಗರ ಸೇರಿದಂತೆ ಕರ್ನಾಟಕದ 75 ಕಡೆಗಳಲ್ಲಿ ಲೋಕಾಯುಕ್ತ ದಾಳಿಯಾಗಿತ್ತು.