Categories: ಕರಾವಳಿ

ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ಸುಳ್ಯದಲ್ಲಿ ಪ್ರತಿಭಟನೆ

ಸುಳ್ಯ: ಕಸ್ತೂರಿ ರಂಗನ್ ವರದಿ ಅನುಷ್ಠಾನ ಮಾಡುವುದನ್ನು ವಿರೋಧಿಸಿ ಮಲೆನಾಡು ಜನಹಿತರಕ್ಷಣಾ ವೇದಿಕೆಯ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಸುಳ್ಯ ತಾಲೂಕಿನ ಕಸ್ತೂರಿ ರಂಗನ್ ಬಾದಿತ ಗ್ರಾಮಗಳ ಜನರ ವಿರೋಧವನ್ನು ವ್ಯಕ್ತಪಡಿಸುವ ನಿಟ್ಟಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವಿರುದ್ಧದ ಹೋರಾಟವನ್ನು ಹತ್ತಿಕ್ಕಲು ಎಷ್ಟೇ ಪ್ರಯತ್ನ ನಡೆದರೂ ಪ್ರಜಾಪ್ರಭುತ್ವ ರೀತಿಯಲ್ಲಿ ಹೋರಾಟ ಮಾಡಿಯೇ ಸಿದ್ಧ ಎಂದು ಹೇಳಿದರು. ಕಸ್ತೂರಿ ರಂಗನ್ ವರದಿಯಿಂದ ಯಾವೊಬ್ಬ ರೈತನಿಗೂ ತೊಂದರೆ ಉಂಟಾಗಲು ಬಿಡುವುದಿಲ್ಲ ಎಂದು ಹೇಳಿದರು.

ಜನರ ಬದುಕಿಗೆ ಮಾರಕವಾಗುವ ಸಂಗತಿಗಳ ಬಗ್ಗೆ ಜನರು ಅರಿತು ಕೊಳ್ಳುವುದಿಲ್ಲ. ವಿಚಾರಗಳಿಗೆ ತಾತ್ಕಾಲಿಕವಾದ ಮತ್ತು ಭಾವನಾತ್ಮಕವಾದ ಸ್ಪರ್ಶ ನೀಡಿ ನೈಜ ಸಮಸ್ಯೆಗಳಿಂದ ಜನರನ್ನು ದೂರ ತಳ್ಳುತ್ತಿದ್ದಾರೆ ಎಂದು ಪ್ರತಿಭಟನೆಯಲ್ಲಿ ಮಾತನಾಡಿದ  ಲಕ್ಷ್ಮೀಶ ಗಬ್ಬಲಡ್ಕ ಹೇಳಿದರು.

ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಮಾತನಾಡಿ `ಯಾವುದೇ ರಾಜಕೀಯ ಪಕ್ಷಗಳು ರೈತರ ಬಗ್ಗೆಗಿನ ಕಾಳಜಿಯಲ್ಲಿ ಆಡಳಿತದಲ್ಲಿರುವಾಗ ಒಂದು ನೀತಿ, ವಿರೋಧದಲ್ಲಿರುವಾಗ ಇನ್ನೊಂದು  ನೀತಿ ಅನುಸರಿಸಬಾರದು ಎಂದು ಹೇಳಿದರು. ಕಸ್ತೂರಿ ರಂಗನ್ ವರದಿಯಿಂದ ಜನರ ಆತಂಕದ ಬಗ್ಗೆ ಪ್ರಧಾನಿಗೆ ಮನವರಿಕೆ ಮಾಡುವ ಕೆಲಸವನ್ನು ಜನಪ್ರತಿನಿಧಿಗಳು ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಸಹಕಾರ ಭಾರತಿಯ ಪ್ರಮುಖರಾದ ಪ್ರಸನ್ನ ಎಣ್ಮೂರು ಮಾತನಾಡಿ ಸರಕಾರಗಳು ರೂಪಿಸುವ ಕಾನೂನುಗಳು, ವರದಿಗಳು ಜನಪರವಾಗಿರಬೇಕೇ ಹೊರತು ಜನರನ್ನು ಆತಂಕಕ್ಕೆ ತಳ್ಳುವಂತಿರಬಾರದು.ಕಸ್ತೂರಿ ರಂಗನ್ ವರದಿಯ ಸಾಧಕ ಬಾದಕಗಳ ಬಗ್ಗೆ ಚರ್ಚೆ ನಡೆದು ಶಾಶ್ವತ ಪರಿಹಾರ ಆಗಬೇಕು ಎಂದರು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ `ಕಸ್ತೂರಿ ರಂಗನ್ ವರದಿ ಈಗಿನ ರೀತಿಯಲ್ಲಿ ಅನುಷ್ಠಾನ ಆದರೆ ಎಲ್ಲರಿಗೂ ಸಮಸ್ಯೆ ಉಂಟಾಗಲಿದೆ. ಆದುದರಿಂದ ಕಸ್ತೂರಿರಂಗನ್ ವಿಚಾರದಲ್ಲಿ ರಾಜಕೀಯ ಬದಿಗಿರಿಸಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕಾಗಿದೆ ಎಂದು  ಹೇಳಿದರು.

ಶೈಲೇಶ್ ಅಂಬೆಕಲ್ಲು ಮಾತನಾಡಿದರು. ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ  ಜಯರಾಮ ಕಟ್ಟೆಮನೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬನ್ನೂರುಪಟ್ಟೆ ಪ್ರದೀಪ್ ಕರಿಕೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಟಿ.ಎನ್.ಸತೀಶ್ ಕಲ್ಮಕ್ಕಾರು ವಂದಿಸಿದರು.

ಮಲೆನಾಡು ಜನಹಿತರಕ್ಷಣಾ ವೇದಿಕೆಯ ತಾಲೂಕು ಸಂಚಾಲಕ ಭಾನುಪ್ರಕಾಶ್ ಪೆರುಮುಂಡ, ಜಿಲ್ಲಾ ಸಮಿತಿ ಸದಸ್ಯ ರವೀಂದ್ರ ರುದ್ರಪಾದ, ಭರತ್ ಕನ್ನಡ್ಕ, ಸಂಪತ್ ಮುತ್ಲಾಜೆ ಪ್ರಮುಖರಾದ ಉಮೇಶ್ ಕಜ್ಜೋಡಿ, ರತ್ನಾಕರ ಬಳ್ಳಡ್ಕ, ದಿವಾಕರ ಪೈ, ಭರತ್ ಕುಮಾರ್, ಮಂಜುನಾಥ್ ಮಡ್ತಿಲ ಮತ್ತಿತರರು ಉಪಸ್ಥಿತರಿದ್ದರು.

Desk

Recent Posts

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

24 mins ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

55 mins ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

1 hour ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

2 hours ago

ಟ್ರಾಫಿಕ್‌ ನಡುವೆ ಮೀಟಿಂಗ್‌ ಅಟೆಂಡ್‌ ಮಾಡಿದ ಮಹಿಳೆ

ವಾಹನದಟ್ಟಣೆಗೆ ಹೆಸರಾಗಿರುವ ರಾಜ್ಯರಾಜಧಾನಿಯಲ್ಲಿ ಮಹಿಳೆಯೊಬ್ಬರು ಟ್ರಾಫಿಕ್‌ ನಡುವೆಯೇ ಮೀಟಿಂಗ್‌ನಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದಾರೆ.

2 hours ago

ಕ್ಷುಲ್ಲಕ ಕಾರಣಕ್ಕೆ ಜಗಳ: ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್…

2 hours ago