ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಆದೇಶದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದಿನಿಂದ ಆ.15ರ ತನಕ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಯಾವುದೇ ಸೇವೆಗಳಿಗೆ ಅವಕಾಶ ಇರುವುದಿಲ್ಲ. ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ವಾರಾಂತ್ಯದ ಶನಿವಾರ ಮತ್ತು ಭಾನುವಾರ ದೇವರ ದರ್ಶನಕ್ಕೂ ಅವಕಾಶ ನಿರ್ಬಂಧಿಸಲಾಗಿದೆ.
ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳು ಅಧಿಕವಾಗಿರುವುದರಿಂದ ಭಕ್ತರ ಆರೋಗ್ಯ ಹಿತದೃಷ್ಟಿಯಿಂದ ಕುಕ್ಕೆಯಲ್ಲಿ ಗುರುವಾರದಿಂದ ಆ.15ರ ತನಕ ಕೇವಲ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 11.30 ತನಕ, ಮಧ್ಯಾಹ್ನ 12.15-1.30 ಹಾಗೂ 2.30ರಿಂದ ರಿಂದ ಸಂಜೆ 7.00 ತನಕ ಭಕ್ತರು ದೇವರ ದರ್ಶನ ಮಾಡಬಹುದು.
ತೀರ್ಥಪ್ರಸಾದ, ಅನ್ನಪ್ರಸಾದ ವಿತರಣೆ ಇರುವುದಿಲ್ಲ. ಅಲ್ಲದೆ, ಯಾವುದೇ ಸೇವೆಗಳು ನಡೆಯುವುದಿಲ್ಲ. ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ. ತಂಗುವ ಭಕ್ತರು 72 ಗಂಟೆಯೊಳಗೆ ಆರ್ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ನೀಡಬೇಕು.