Categories: ಕರಾವಳಿ

ಕುಕ್ಕೆ: ಇಂದಿನಿಂದ ಸೇವೆಯಿಲ್ಲ, ದರ್ಶನಕ್ಕೆ ಮಾತ್ರ ಅವಕಾಶ

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಆದೇಶದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದಿನಿಂದ ಆ.15ರ ತನಕ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಯಾವುದೇ ಸೇವೆಗಳಿಗೆ ಅವಕಾಶ ಇರುವುದಿಲ್ಲ. ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ವಾರಾಂತ್ಯದ ಶನಿವಾರ ಮತ್ತು ಭಾನುವಾರ ದೇವರ ದರ್ಶನಕ್ಕೂ ‌‌ಅವಕಾಶ ನಿರ್ಬಂಧಿಸಲಾಗಿದೆ.

ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳು ಅಧಿಕವಾಗಿರುವುದರಿಂದ ಭಕ್ತರ ಆರೋಗ್ಯ ಹಿತದೃಷ್ಟಿಯಿಂದ ಕುಕ್ಕೆಯಲ್ಲಿ ಗುರುವಾರದಿಂದ ಆ.15ರ ತನಕ ಕೇವಲ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 11.30 ತನಕ, ಮಧ್ಯಾಹ್ನ 12.15-1.30 ಹಾಗೂ 2.30ರಿಂದ ರಿಂದ ಸಂಜೆ 7.00 ತನಕ ಭಕ್ತರು ದೇವರ ದರ್ಶನ ಮಾಡಬಹುದು.

ತೀರ್ಥಪ್ರಸಾದ, ಅನ್ನಪ್ರಸಾದ ವಿತರಣೆ ಇರುವುದಿಲ್ಲ. ಅಲ್ಲದೆ, ಯಾವುದೇ ಸೇವೆಗಳು ನಡೆಯುವುದಿಲ್ಲ. ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ. ತಂಗುವ ಭಕ್ತರು 72 ಗಂಟೆಯೊಳಗೆ ಆರ್‌ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ನೀಡಬೇಕು.

Sampriya YK

Recent Posts

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

4 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

5 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

10 mins ago

ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಇತ್ತೀಚೆಗೆ ದೇಶದಾದ್ಯಂತ ಬಾಂಬ್‌ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…

21 mins ago

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

33 mins ago

ಪತಂಜಲಿಯ ಸೋನ್​ಪಾಪ್ಡಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ಮೂವರ ಬಂಧನ

 ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…

38 mins ago