News Karnataka Kannada
Wednesday, May 08 2024
ಕರಾವಳಿ

ಕೃಷಿ, ಭೂ ಸುಧಾರಣಾ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಸುಳ್ಯದಲ್ಲಿ ಪ್ರತಿಭಟನೆ

Photo Credit :

ಕೃಷಿ, ಭೂ ಸುಧಾರಣಾ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಸುಳ್ಯದಲ್ಲಿ ಪ್ರತಿಭಟನೆ

ಸುಳ್ಯ: ರಾಜ್ಯ ಮತ್ತು ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ, ಭೂ ಸುಧಾರಣಾ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಬೆಂಬಲ ಸೂಚಿಸಿ ಸುಳ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ಭೂ ಸುಧಾರಣಾ ಕಾಯಿದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ, ಅಗತ್ಯ ಸರಕುಗಳ ಕಾಯ್ದೆ ಮತ್ತಿತರ ಕಾಯ್ದೆಗಳ ತಿದ್ದುಪಡಿಯನ್ನು ವಿರೋಧಿಸಿ ಸುಳ್ಯ ತಾಲೂಕು ರೈತ, ಕಾರ್ಮಿಕ, ದಲಿತ ಜನಪರ ಚಳುವಳಿಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಯಿತು.

ಕಾಂಗ್ರೆಸ್, ಜೆಡಿಎಸ್ ಮತ್ತು ಸಿಪಿಐಎಂ ಪಕ್ಷಗಳು, ಸಿಐಟಿಯು, ಡಿವೈಎಫ್‍ಐ ಸೇರಿ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು. ಜ್ಯೋತಿ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಗಾಂಧಿನಗರದವರೆಗೆ ಸಾಗಿ ಬಳಿಕ ಬಸ್ ನಿಲ್ದಾಣದ ಬಳಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಡಿವೈಎಫ್ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಸುಳ್ಯ ತಾಲೂಕು ರೈತ,ಕಾರ್ಮಿಕ,ದಲಿತ ಪ್ರಗತಿಪರ ಚಳುವಳಿಗಳ ಒಕ್ಕೂಟದ ಸಂಚಾಲಕ ಕೆ.ಪಿ.ಜಾನಿ ಕಲ್ಲುಗುಂಡಿ, ಸುಳ್ಯ ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಕೇಂದ್ರ ರಾಜ್ಯ ಸರಕಾರಗಳು ಜಾರಿಗೆ ತರಲು ಉದ್ದೇಶಿಸಿರುವ ಕಾಯಿದೆಗಳು ಜನ ವಿರೋಧಿ ಮತ್ತು ಕೃಷಿಕ ವಿರೋಧಿಯಾಗಿದೆ. ಇದನ್ನು ಕೂಡಲೇ ಹಿಂಪಡೆಯಬೇಕು. ತಿದ್ದುಪಡಿಯನ್ನು ಹಿಂಪಡೆಯುವ ತನಕ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಭಟನೆಯಲ್ಲಿ ಮಾತನಾಡಿದ ಪ್ರಮುಖರು ಹೇಳಿದರು.

ಬಂದ್‍ಗೆ ನೀರಸ ಪ್ರತಿಕ್ರಿಯೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿ ಮಾಡಲು ಮುಂದಾಗಿರುವ ಕೃಷಿ, ಭೂಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್‍ಗೆ ಸುಳ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬಂದ್‍ಗೆ ಯಾವುದೇ ಪ್ರತಿಕ್ರಿಯೆ ಇರಲಿಲ್ಲ. ಜನ ಜೀವನ ಎಂದಿನಂತೆ ಇತ್ತು.ಅಂಗಡಿ ಮುಂಗಟ್ಟುಗಳು ತೆರದು ಕಾರ್ಯಾಚರಿಸಿದವು. ವಾಹನ ಸಂಚಾರ ಎಂದಿನಂತೆ ಇತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು