Categories: ಕರಾವಳಿ

ಕೃಷ್ಣ ಮಠದ ಮಧ್ವ ಸರೋವರದಲ್ಲಿ ಯಾತ್ರಾರ್ಥಿ ಮುಳುಗಿ ಸಾವು

ಉಡುಪಿ: ಕೃಷ್ಣ ಮಠದ ಮಧ್ವ ಸರೋವರದಲ್ಲಿ ಯಾತ್ರಾರ್ಥಿಯೋರ್ವ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಮುಂಜಾವ ನಡೆದಿದೆ. ಮೃತರನ್ನು ಶಿವಮೊಗ್ಗ, ವಿದ್ಯಾನಗರ ನಿವಾಸಿ ಆದರ್ಶ್ (39) ಎಂದು ಗುರುತಿಸಲಾಗಿದೆ.

ಇಂದು ಮುಂಜಾನೆ 5.45 ರ ಹೊತ್ತಿಗೆ ಈ ಅವಘಡ ಸಂಭವಿಸಿದೆ. ಆದರ್ಶ್ ಅವರು ಮಧ್ವ ಸರೋವರದಲ್ಲಿ ಸ್ನಾನಕ್ಕಿಳಿದವರು ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ತಕ್ಷಣ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದರೂ ಮೃತದೇಹ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ.

ಬಳಿಕ ಮುಳುಗು ತಜ್ಞ ಅರುಣ್ ಕುಮಾರ್ ಸರೋವರಕ್ಕಿಳಿದು ಮೃತದೇಹ ಮೇಲಕ್ಕೆತ್ತಿದರು. ಆದರ್ಶ್ ಮಠದ ವಸತಿ ಗೃಹದಲ್ಲಿ ನಿಂತಿದ್ದು, ಅಲ್ಲಿ ಶಿವಮೊಗ್ಗ ವಿದ್ಯಾನಗರದ ನಿವಾಸಿ ಎಂದು ನಮೂದಿಸಲಾಗಿದೆ. ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

 

Desk

Recent Posts

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

16 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

1 hour ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

3 hours ago