ಪುತ್ತೂರು: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಫೆ.8ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೆಯ್ಯೂರು ಗ್ರಾಮದ ಕಾಪುತ್ತಡ್ಕ ದಿ.ಬೇಡು ಎಂಬವರ ಪುತ್ರ ಕುಂಞ(35ವ)ರವರು ಮೃತಪಟ್ಟವರು. ಅವರು ಫೆ.5ರಂದು ತನ್ನ ಮನೆಯ ಸಮೀಪದ ಅಡಿಕೆ ಮರಕ್ಕೆ ಹತ್ತಿ ಅಡಿಕೆ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು.
ಅವರನ್ನು ಮಂಗಳೂರು ವೆನ್ಲಾ್ಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಫೆ. 8ರಂದು ಮೃತಪಟ್ಟಿದ್ದಾರೆ. ಮೃತರ ಸಹೋದರ ಚೋಮ ಎಂಬವರು ನೀಡಿದ ದೂರಿನಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಮತ್ತು ಸಹೋದರ ಸಹೋದರಿಯರನ್ನು ಅಗಲಿದ್ದಾರೆ.