Categories: ಕರಾವಳಿ

ಕೊಳ್ತಿಗೆ: ಪರಸ್ಪರ ಹೊಡೆದಾಟ-ಓರ್ವ ಮೃತ್ಯು

ಪುತ್ತೂರು: ಪೂರ್ವದ್ವೇಷದಿಂದ ಪರಸ್ಪರ ಹಡೆದಾಟ ನಡೆಸಿ ದೊಣ್ಣೆಯೇಟಿನಿಂದ ಓರ್ವ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರು ಕಾಲೋನಿಯಲ್ಲಿ ಮಂಗಳವಾರ ತಡ ರಾತ್ರಿ ನಡೆದಿದೆ.

ಕೊಳ್ತಿಗೆ ಪಾಂಬಾರು ನಿವಾಸಿ ವೈತ್ಲಿಂಗಮ್  ಪುತ್ರ ಕೆ.ಎಫ್.ಡಿ.ಸಿ ರಬ್ಬರ್ ಟ್ಯಾಪರ್ ಚೆಲುವ ಕುಮಾರ್(48)ರವರು ಮೃತಪಟ್ಟವರು. ಪಾಂಬಾರು ರಬ್ಬರ್ ಟ್ಯಾಪರ್ ಕಾಲೋನಿಯಲ್ಲಿ ಸ್ಥಳೀಯ ನಿವಾಸಿ ಪಾಂಬರು ರಾಧಾಕೃಷ್ಣನ್ ಪುತ್ರ ಕೂಲಿ ಕಾರ್ಮಿಕ ಗಗನ್(23ವ) ಮತ್ತು ಚೆಲುವ ಕುಮಾರ್ ರವರಲ್ಲಿ ಪೂರ್ವ ದ್ವೇಷದ ಕಾರಣದಿಂದಾಗಿ ಪರಸ್ಪರ ಹಲ್ಲೆ ನಡೆದಿತ್ತು. ಘಟನೆಯಿಂದಾಗಿ ಗಗನ್  ದೊಣ್ಣೆಯಿಂದ ಚೆಲುವ ಕುಮಾರ್ ನ ತಲೆಗೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಹಲ್ಲೆ ಸಂದರ್ಭದಲ್ಲಿ ಚೆಲುವ ಕುಮಾರ್  ರಬ್ಬರ್ ಟ್ಯಾಪಿಂಗ್ ಕತ್ತಿಯಿಂದ ಗಗನ್ ಗೆ ತಿವಿದಿದ್ದಾರೆ. ತೀವ್ರ ಗಾಯಗೊಂಡ ಗಗನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಎ.ಎಸ್ಪಿ ರಿಷ್ಯಂತ್, ಸಂಪ್ಯ ಎಸ್.ಐ ರವಿ. ಎ.ಎಸ್.ಐ ಚೆಲುವಯ್ಯರವರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

 

Desk

Recent Posts

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

4 mins ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

26 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

44 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

58 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

1 hour ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago