News Karnataka Kannada
Friday, May 17 2024
ಕರಾವಳಿ

ಕೋಮುವಾದಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ: ಸಿದ್ದರಾಮಯ್ಯ

Photo Credit :

ಕೋಮುವಾದಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ: ಸಿದ್ದರಾಮಯ್ಯ

ಉಡುಪಿ:  ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದು ಶೋಭಾ ಕರಂದ್ಲಾಜೆ ಕನಸು ಕಾಣುತ್ತಿದ್ದಾರೆ. ಅದು ಅವರ ಭ್ರಮೆ ಅಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ಅವರು ಗುರುವಾರ ಉಡುಪಿಯ ಬೈಂದೂರಿನಲ್ಲಿ ಮಧು ಬಂಗಾರಪ್ಪ ಪರ ಚುನವಣಾ ಪ್ರಚಾರಕ್ಕಾಗಿ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಮ್ಮಿಶ್ರ ಸರಕಾರ ಸುಭದ್ರವಾಗಿದ್ದು, ಯಡಿಯೂರಪ್ಪ ಮತ್ತು ಶೋಭಾ ಕರಂದ್ಳಾಜೆ ಅವರಿಗೆ ಸುಳ್ಳು ಹೇಳೋದೇ ಒಂದು ಕೆಲಸ ಎಂದು ಕಿಡಿಕಾರಿದ್ದಾರೆ. ಪ್ರಸ್ತುತ ಯಡಿಯೂರಪ್ಪನವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತೂ ಇಲ್ಲ. ನಾವು ಈಗ ಉಪಚುನಾವಣೆ ಪ್ರಚಾರದಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದೇವೆ. ಹಿಂದಿನದನ್ನೆಲ್ಲ ಮರೆತಿದ್ದೇವೆ. ಜೆಡಿಎಸ್ ಕಾಂಗ್ರೆಸ್ ಒಟ್ಟಾಗಿ ಹೋರಾಡಲಿದೆ. ಐದೂ ಕ್ಷೇತ್ರದ ಉಪಚುನಾವಣೆಯಲ್ಲೂ ನಾವು ಗೆಲ್ಲುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.

ಮುಂದಿನ ಲೋಕಸಭೆ ಚುನಾವಣೆಯಲ್ಲೂ ಮೈತ್ರಿ ಮುಂದುವರೆಯುತ್ತೆ. ಕೋಮುವಾದಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
192
Shreyas Vittal

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು