Categories: ಕರಾವಳಿ

ಗಡಿ ಗ್ರಾಮಗಳಲ್ಲಿ ಹೆಚ್ಚಿದ ಕಾಡಾನೆ ಹಾವಳಿ

ಸುಳ್ಯ: ಕೇರಳ ಮತ್ತು ಕರ್ನಾಟಕ ರಾಜ್ಯಗಳ ಗಡಿ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮತ್ತೆ ಅಧಿಕವಾಗಿದೆ. ಜಾಲ್ಸೂರು ಸಮೀಪದ ಮಹಾಬಲಡ್ಕ, ಪಂಜಿಕಲ್ಲು ಭಾಗಗಳಲ್ಲಿ ಮತ್ತು ಮಂಡೆಕೋಲು ಗ್ರಾಮದ ಕಾಡುಸೊರಂಜ, ನೀರ್ಪಾಡಿ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಗಳ ಆಟಾಟೋಪ ಮಿತಿ ಮೀರಿದೆ.

ಜನವಸತಿ ಪ್ರದೇಶದ ಸಮೀಪದಲ್ಲೇ ಬೀಡು ಬಿಟ್ಟಿರುವ ಏಳು ಕಾಡಾನೆಗಳ ಹಿಂಡು ತೆಂಗು, ಕಂಗು, ಬಾಳೆ ಕೃಷಿಗಳನ್ನು ಪುಡಿಗಟ್ಟಿದೆ. ಅರಣ್ಯ ಇಲಾಖೆ ಮತ್ತು ಸಾರ್ವಜನಿಕರು ಸೇರಿ ಪಟಾಕಿ ಸಿಡಿಸಿ, ಬೆಂಕಿ ಹಾಕಿ, ತಮಟೆ, ಚೆಂಡೆ ಬಾರಿ ಕಾಡಾನೆಗಳನ್ನು ಮರಳಿ ಕಾಡಿಗಟ್ಟಲು ಪ್ರಯತ್ನ ನಡೆಸಿದರೂ ಮರಿ ಸಮೇತ ಇರುವ ಆನೆಗಳ ಹಿಂಡು ದೂರ ಸರಿಯದೆ ಜನವಸತಿ ಪ್ರದೇಶದ ಸಮೀಪದಲ್ಲೇ ಬೀಡು ಬಿಟ್ಟಿದ್ದು ನಾಡಿಗೆ ನುಗ್ಗುತಿದೆ. ಕಾರ್ಯಾಚರಣೆ ವೇಳೆ ಹಲವು ಬಾರಿ ಆನೆಗಳು ಜನರನ್ನು ಹಿಮ್ಮೆಟ್ಟಿಸಿದ್ದು ಆತಂಕ ಸೃಷ್ಟಿಸಿತು.

ಪಯಸ್ವಿನಿ ನದಿಯ ಎರಡೂ ಬದಿಯ ಎರಡೂ ರಾಜ್ಯದ ಗಡಿ ಗ್ರಾಮಗಳು ಹಲವು ದಿನಗಳಿಂದ ಕಾಡಾನೆಗಳ ಉಪಟಳದಿಂದ ನಲುಗಿ ಹೋಗಿದೆ.

Desk

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago