ಪುತ್ತೂರು : ಕರ್ನಾಟಕ-ಕೇರಳ ಗಡಿಭಾಗದ ಕಲ್ಲಪಳ್ಳಿ ಚೆಕ್ಪೋಸ್ಟ್ನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಗೆ ಉಳಿದುಕೊಳ್ಳಲು ಬಸ್ ತಂಗುದಾಣ ಹಾಗೂ ಶೌಚಾಲಯಕ್ಕೆ ಸನಿಹದ ಮನೆಗಳಿಗೆ ತೆರಳಬೇಕಾದ ಸಂಕಷ್ಟವನ್ನು ಆಲಿಸಿದ ಸಚಿವ ಎಸ್. ಅಂಗಾರ ಅವರು ತತ್ಕ್ಷಣ ವ್ಯವಸ್ಥಿತ ಶೆಡ್ ಹಾಗೂ ಶೌಚಾಲಯ ನಿರ್ಮಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ತಪಾಸಣ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರಿಗೆ ಅಲ್ಲಿನ ವ್ಯವಸ್ಥೆಯ ಕುರಿತು ಪೊಲೀಸ್ ಸಿಬಂದಿ ಗಮನಕ್ಕೆ ತಂದರು. ಅಲ್ಲಿ ಪೋಲಿಸ್ ಸಿಬಂದಿ ಮತ್ತು ಆಶಾ ಕಾರ್ಯಕರ್ತೆಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ಸಂಕಷ್ಟವನ್ನು ಕಣ್ಣಾರೆ ಕಂಡ ಸಚಿವರು ತತ್ಕ್ಷಣವೇ ಎಂಜಿನಿಯರ್ ಮಣಿಕಂಠ ಅವರಿಗೆ ದೂರವಾಣಿ ಕರೆ ಮಾಡಿ, ಅಲ್ಲೇ ಸನಿಹದಲ್ಲಿ ವ್ಯವಸ್ಥಿತ ಶೆಡ್, ಶೌಚಾಲಯ ವ್ಯವಸ್ಥೆ ಮತ್ತು ಸೋಲಾರ್ ಲೈಟ್ನ ವ್ಯವಸ್ಥೆ ಮಾಡುವಂತೆ ಆದೇಶ ನೀಡಿದರು. ತಹಶೀಲ್ದಾರ್ ಅನಿತಾಲಕ್ಷ್ಮೀ, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಸರ್ಕಲ್ ಇನ್ಸ್ಪೆಪೆಕ್ಟರ್ ನವೀನ್ ಚಂದ್ರ ಜೋಗಿ, ಎಸ್ಐ ಹರೀಶ್, ಜಿ.ಪಂ. ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು, ಉಪಾಧ್ಯಕ್ಷ ದಿನೇಶ್ ಕಣಕ್ಕೂರು, ಗ್ರಾಮ ಲೆಕ್ಕಾಧಿಕಾರಿ ಶರತ್ ಕುಮಾರ್, ಪಿಡಿಒ ಕೀರ್ತಿಪ್ರಸಾದ್, ಆಲೆಟ್ಟಿ ಸೊಸೈಟಿ ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ ಮೊದಲಾದವರಿದ್ದರು.
| |
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…