ಕಾರವಾರ: ಸಮುದ್ರದಲ್ಲಿ ಈಜಾಡುವಾಗ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋಗಿ ಯುವಕನೊಬ್ಬ ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕಡಲ ತೀರದಲ್ಲಿ ಸೋಮವಾರ ನಡೆದಿದೆ.
ಕೊಚ್ಚಿ ಹೋದ ಯುವಕನನ್ನು ಬೆಂಗಳೂರು ನಗರದ ಬಿಟಿಎಂ ಲೇಔಟ್ ನಿವಾಸಿ ಅರುಣ ಲಕ್ಕಪ್ಪ (22) ಎಂದು ಗುರುತಿಸಲಾಗಿದೆ. ಎಂಟು ಮಂದಿ ಬೆಂಗಳೂರಿನಿಂದ ಗೋಕರ್ಣಕ್ಕೆ ಇಂದು ಮುಂಜಾನೆ ಪ್ರವಾಸಕ್ಕೆ ಬಂದಿದ್ದರು. ಸ್ಥಳೀಯ ಜನರ ಎಚ್ಚರಿಕೆ ನಡುವೆಯೂ ಎಂಟು ಜನ ಈಜಲು ಸಮುದ್ರಕ್ಕೆ ಇಳಿದಿದ್ದರು.
ಅಲೆಯ ಅಬ್ಬರಕ್ಕೆ ಇಬ್ಬರು ಕೊಚ್ಚಿಹೋಗಿದ್ದರು. ಈ ವೇಳೆ ಓರ್ವನನ್ನು ಲೈಫ್ ಗಾರ್ಡ ಹಾಗೂ ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿದೆ. ಸಮುದ್ರಕ್ಕೆ ಇಳಿದಿದ್ದ ಉಳಿದವರು ಈಜಿ ದಡ ಸೇರಿದ್ದಾರೆ. ಆದರೆ ಅಲೆಗಳ ಅಬ್ಬರಕ್ಕೆ ಅರುಣ್ ತೇಲಿ ಹೋಗಿದ್ದಾನೆ.ಸಮುದ್ರ ಪಾಲಾದ ಈತನ ಪತ್ತೆಗಾಗಿ ಪೊಲೀಸರು ಹಾಗೂ ಲೈಫ್ ಗಾರ್ಡ್ ಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ.
ಗೋಕರ್ಣದಲ್ಲಿ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋದ ಯುವಕ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.