Categories: ಕರಾವಳಿ

ಗ್ರಾ.ಪಂ.ಚುನಾವಣೆ ಮತ ಎಣಿಕೆಗೆ ಸಿದ್ಧತೆ ಪೂರ್ಣ

ಸುಳ್ಯ: ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ಡಿ.30 ನಡೆಯಲಿದೆ.

ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯ ಮತ ಎಣಿಕೆಗೆ ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಬೆಳಗ್ಗೆ ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರ ಬೀಳುವ ಸಾಧ್ಯತೆ ಇದೆ. ಎಂಟು ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಮತ ಎಣಿಕೆಗಾಗಿ 13 ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ. 38 ಟೇಬಲ್ ಗಳಲ್ಲಿ 25 ಗ್ರಾ.ಪಂ.ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ದೊಡ್ಡ ಕ್ಷೇತ್ರಗಳಿಗೆ ಒಂದೊಂದು ಟೇಬಲ್ ಮೀಸಲಿರಿಸಿದರೆ, ಚಿಕ್ಕ ಕ್ಷೇತ್ರಗಳಾದರೆ ಒಂದು ಟೇಬಲ್‍ನಲ್ಲಿ ಎರಡು ಕ್ಷೇತ್ರಗಳ ಮತ ಎಣಿಕೆ ನಡೆಸಲಾಗುವುದು. ಪ್ರತಿ ಟೇಬಲ್‍ಗೆ ಒಬ್ಬ ಮೇಲ್ವಿಚಾರಕ, ಇಬ್ಬರು ಸಹಾಯಕರು ಮತ್ತು ಒಬ್ಬ ಡಿಗ್ರೂಪ್ ನೌಕರರನ್ನು ನಿಯೋಜನೆ ಮಾಡಲಾಗಿದೆ ಎಂದು ಸುಳ್ಯ ತಹಶೀಲ್ದಾರ್ ವೇದವ್ಯಾಸ ಮುತಾಲಿಕ್ ತಿಳಿಸಿದ್ದಾರೆ.

ಬೆಳಗ್ಗೆ ಎಂಟು ಗಂಟೆಗೆ ಮತ ಎಣಿಕೆ ಆರಂಭಗೊಳ್ಳಲಿದ್ದು ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದೆ. ಬಳಿಕ ಮತಪೆಟ್ಟಿಗೆಯ ಮತಪತ್ರಗಳನ್ನು 25 ರಂತೆ ಬಂಡಲ್ ಮಾಡಿದ ಬಳಿಕ ಎಣಿಕೆ ನಡೆಯಲಿದೆ. ಅಭ್ಯರ್ಥಿ ಅಥವಾ ಒಬ್ಬ ಏಜೆಂಟ್‍ಗೆ ಮತ ಎಣಿಕೆ ಕೇಂದ್ರದ ಭೇಟಿಗೆ ಅನುಮತಿ ನೀಡಲಾಗುವುದು. ಆಯಾ ಕ್ಚೇತ್ರದ ಮತ ಎಣಿಕೆ ಸಂದರ್ಭ ಇವರಿಗೆ ಮತ ಎಣಿಕೆ ಕೊಠಡಿಗೆ ಪ್ರವೇಶ ನೀಡಲಾಗುವುದು ಎಂದು ತಹಶೀಲ್ದಾರ್ ವೇದವ್ಯಾಸ ಮುತಾಲಿಕ್ ಮಾಹಿತಿ ನೀಡಿದ್ದಾರೆ.

 

ಮತ ಎಣಿಕೆಗೆ ಬಿಗು ಭದ್ರತೆ: 

ಸುಳ್ಯ: ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ಡಿ.30 ರಂದು ನಡೆಯಲಿದ್ದು ಮತ ಎಣಿಕೆ ಕೇಂದ್ರದ ಸುತ್ತ ಬಿಗು ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಮತಪೆಟ್ಟಿಗೆಗಳನ್ನು ನೆಹರೂ ಸ್ಮಾರಕ ಕಾಲೇಜಿನ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದ್ದು ಪೊಲೀಸ್ ಕಾವಲು ಏರ್ಪಡಿಸಲಾಗಿದೆ. ಮತ ಎಣಿಕೆ  ಕೇಂದ್ರದ 200 ಮೀಟರ್ ಸುತ್ತಳತೆಯಲ್ಲಿ ಡಿ.29 ರಂದು ರಾತ್ರಿ12 ರಿಂದ ಡಿ.30ರ ರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿರುವ ಕಾರಣ ಜನ ಗುಂಪು ಸೇರುವುದು, ವಿಜಯೋತ್ಸವ, ಮೆರವಣಿಗೆ, ಬಹಿರಂಗ ಸಭೆ ನಡೆಸುವುದಕ್ಕೆ ನಿಷೇಧ ಹೇರಲಾಗಿದೆ ಎಂದು ಸುಳ್ಯ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಮತ ಎಣಿಕೆ ಕೇಂದ್ರಕ್ಕೆ ಅಭ್ಯರ್ಥಿ ಅಥವಾ ಅಭ್ಯರ್ಥಿಯ ಪರ ಓರ್ವ ಏಜೆಂಟ್‍ಗೆ ಮಾತ್ರ ಪ್ರವೇಶ ನೀಡಲಾಗುವುದು. ವಾಹನಗಳನ್ನು ಎಪಿಎಂಸಿ ಯಾರ್ಡ್ ಮತ್ತು ಪುರಭವನ ಪರಿಸರದಲ್ಲಿ ಪಾಕಿರ್ಂಗ್ ಮಾಡಬೇಕು ಎಂದು ಸೂಚಿಲಾಗಿದೆ.

Desk

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

5 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

5 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

6 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

6 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

6 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

7 hours ago