News Karnataka Kannada
Friday, May 03 2024
ಕರಾವಳಿ

ಘನ ತ್ಯಾಜ್ಯ ನಿರ್ವಹಣೆ ಕುರಿತು ಮಂಗಳೂರು ಮಹಾನಗರಪಾಲಿಕೆಯಿಂದ ಸಭೆ

Mcc Meet
Photo Credit :

ಘನ ತ್ಯಾಜ್ಯ ನಿರ್ವಹಣೆ ಕುರಿತು ಮಹಾನಗರಪಾಲಿಕೆಯಿಂದ ಸಭೆ
ಮಂಗಳೂರು ; ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮ 2016ರ ಮತ್ತು ಮಂಗಳೂರು ಮಹಾನಗರಪಾಲಿಕೆ ಘನತ್ಯಾಜ್ಯ ವಸ್ತು ನಿರ್ವಹಣೆಯ ಬೈಲಾ ಪ್ರಕಾರ ಪಾಲಿಕೆಯಲ್ಲಿರುವ 30 ಕ್ಕಿಂತ ಹೆಚ್ಚು ಮನೆ ಹೊಂದಿರುವ ಅಪಾರ್ಟ್‍ಮೆಂಟ್‍ಗಳಲ್ಲಿ ಮತ್ತು ಇತರೆ ದೊಡ್ಡ ಸಂಸ್ಥೆಗಳಲ್ಲಿ (ಹೋಟೇಲ್, ಆಸ್ಪತ್ರೆ, ಲಾಡ್ಜ್, ಕಲ್ಯಾಣಮಂಟಪ, ಕೆಟರಿಂಗ್ ಇತ್ಯಾದಿ) ಸ್ವಂತ ತ್ಯಾಜ್ಯ ಸಂಸ್ಕರಣ ಕಾಂಪೋಸ್ಟಿಂಗ್ ಘಟಕವನ್ನು (On-site Composting) ಕಡ್ಡಾಯವಾಗಿ ನಿರ್ಮಿಸುವಂತೆ ಮತ್ತು ಉತ್ಪಾದನೆಯಾಗುವ ತ್ಯಾಜ್ಯವನ್ನು ಸ್ಥಳದಲ್ಲಿಯೇ ಸಂಸ್ಕರಣೆ ಮಾಡುವಂತೆ ತಿಳಿಸಿ ಸಂಬಂಧಪಟ್ಟ ಎಲ್ಲಾ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟೀಸು ನೀಡಲಾದ ಹೊರತಾಗಿಯೂ ಸದ್ರಿ ಆದೇಶವನ್ನು ಲಘುವಾಗಿ ಪರಿಗಣಿಸಿ ಇಲ್ಲಿಯ ವರೆಗೆ ಯಾವುದೇ ಸಕರಾತ್ಮಕ ಸ್ಪಂದನೆ ನೀಡದಿರುವುದರ ಬಗ್ಗೆ ದಿನಾಂಕ: 27-07-2021 ರಂದು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸದ್ರಿ ಸಂಸ್ಥೆಗಳ ವಿಚಾರಣಾ ಸಭೆಯನ್ನು ನಡೆಸಲಾಗಿ ಪ್ರಸ್ತುತ ಮಂಗಳೂರು ಮಹಾನಗರಪಾಲಿಕೆಯ ಘನತ್ಯಾಜ್ಯ ನಿರ್ವಹಣೆಯ ಕುರಿತಾಗಿ ಉಚ್ಚ ನ್ಯಾಯಾಲಯದಲ್ಲಿ ದಾಖಲಾದ ರಿಟ್ ಅರ್ಜಿಯು ವಿಚಾರಣೆ ಹಂತದಲ್ಲಿದ್ದು, ಘನತ್ಯಾಜ್ಯ ನಿಯಮಗಳ ಅನುಷ್ಟಾನದ ನಿಟ್ಟಿನಲ್ಲಿ ಸಾಧಿಸಿರುವ ಪ್ರಗತಿಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುವುದರಿಂದ ತ್ಯಾಜ್ಯ ನಿರ್ವಹಣೆ ಚಟುವಟಿಕೆಯನ್ನು ಕಾಲಮಿತಿಯೊಳಗೆ ಅನುಷ್ಟಾನಗೊಳಿಸಬೇಕಾಗಿರುವ ಅನಿವಾರ್ಯತೆ ಬಗ್ಗೆ ಮಾಹಿತಿ ನೀಡಲಾಯಿತು.
ಈ ಸಭೆಯಲ್ಲಿ ಹಾಜರಿದ್ದ ಪ್ರತಿನಿಧಿಗಳು ಪಾಲಿಕೆಯಿಂದ ಅಸಮರ್ಪಕವಾಗಿ / ಅನಿಯಮಿತವಾಗಿ ಕಸ ಸಂಗ್ರಹಣೆ ಮಾಡುತ್ತಿರುವ ವಿಚಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದಾಗ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಪ್ರತಿದಿನ ಸಮರ್ಪಕವಾಗಿ ಕಸ ಸಂಗ್ರಹಣೆ ಮಾಡಲು ಗುತ್ತಿಗೆದಾರರಿಗೆ ನಿರ್ದೇಶನ ನೀಡಲಾಗುವುದೆಂದು ಆಯುಕ್ತರು ಸೂಚಿಸಿದರು. ಪ್ರಸ್ತುತ ತ್ಯಾಜ್ಯ ವಿಲೇವಾರಿಯ ಗಂಭೀರತೆಯನ್ನು ಪರಿಗಣಿಸಿ ಸಂಬಂಧಪಟ್ಟ ಎಲ್ಲಾ ಸಂಸ್ಥೆಗಳು ತಮ್ಮ ಕಟ್ಟಡಗಳಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯಗಳನ್ನು ಸ್ಥಳದಲ್ಲಿಯೇ ಸಂಸ್ಕರಣೆ ಮಾಡಲು ಇನ್ನೂ ಮೂರು ತಿಂಗಳ ಅವಕಾಶ ಅಂದರೆ ದಿನಾಂಕ: 31-10-2021ರೊಳಗೆ ಕಡ್ಡಾಯವಾಗಿ ತ್ಯಾಜ್ಯ ಸಂಸ್ಕರಣ ಕಾಂಪೋಸ್ಟಿಂಗ್ ಘಟಕವನ್ನು (On-site Composting) ನಿರ್ಮಿಸುವಂತೆ ಹಾಜರಿದ್ದ ಭಾಗೀದಾರರಿಗೆ (Stake holders) ಕಟ್ಟುನಿಟ್ಟಿನ ನಿರ್ದೇಶನ ನೀಡಲಾಯಿತು.
ಈ ಬಗ್ಗೆ ಮಾನ್ಯ ಹಸಿರು ನ್ಯಾಯ ಪೀಠ (NGT) ರವರಿಂದ ಅನುಮೋದನೆಗೊಂಡ ಹಸಿ ತ್ಯಾಜ್ಯ ಸಂಸ್ಕರಣಾ ತಂತ್ರಜ್ಞಾನ ಹೊಂದಿರುವ ಸಂಸ್ಥೆಗಳ ಮೂಲಕ ಅವಶ್ಯಕತೆಗೆ ಅನುಗುಣವಾಗಿ ತಮ್ಮ ಹಂತದಲ್ಲಿ ಬಳಸಬಹುದಾದ ತಂತ್ರಜ್ಞಾನವನ್ನು ಅಳವಡಿಸಿಕೊಂಡು ತ್ಯಾಜ್ಯ ಸಂಸ್ಕರಣ ಕಾಂಪೋಸ್ಟಿಂಗ್ ಘಟಕವನ್ನು ಸ್ಥಾಪಿಸುವಂತೆ ಸೂಚಿಸುತ್ತಾ ಈ ಕುರಿತಂತೆ ಸಾರ್ವಜನಿಕರ ಮಾಹಿತಿಗಾಗಿ ಸದ್ರಿ ಸಂಸ್ಥೆಗಳ ಪಟ್ಟಿಯನ್ನು ಪಾಲಿಕೆಯ ವೆಬ್‍ಸೈಟ್‍ನಲ್ಲಿ ಪ್ರಚುರಪಡಿಸಲಾಗುವುದು ಎಂದು ತಿಳಿಸಿದರು.
ಸಂಬಧಪಟ್ಟ ಬೃಹತ್ ತ್ಯಾಜ್ಯ ಉತ್ಪಾದಕರು ನಿಗಧಿಪಡಿಸಿದ ಅವಧಿಯೊಳಗೆ ಸ್ವಂತ ತ್ಯಾಜ್ಯ ಸಂಸ್ಕರಣ ಕಾಂಪೋಸ್ಟಿಂಗ್ ಘಟಕವನ್ನು (On-site Composting) ಸ್ಥಾಪಿಸಲು ವಿಫಲವಾದಲ್ಲಿ ತಪ್ಪಿತಸ್ಥರಿಗೆ ನವಂಬರ್ 1 2021 ರಿಂದ ಅನ್ವಯಿಸುವಂತೆ ಪಾಲಿಕೆಯಿಂದ ಪ್ರತಿದಿನ ದುಪ್ಪಟ್ಟು ದಂಡ ವಿಧಿಸಿಕೊಂಡು ತ್ಯಾಜ್ಯ ಸಂಗ್ರಹಿಸಲಾಗುವುದೆಂದು ಕಟ್ಟುನಿಟ್ಟಾದ ಸೂಚನೆ ನೀಡಿದರು. ಸಭೆಯಲ್ಲಿ ಉಪ ಆಯುಕ್ತರು (ಆಡಳಿತ), ಆರೋಗ್ಯಾಧಿಕಾರಿ, ಪರಿಸರ ಅಭಿಯಂತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು