News Karnataka Kannada
Saturday, May 11 2024
ಕರಾವಳಿ

ಚಿಕ್ಕಪ್ಪನಿಂದ ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

Photo Credit :

ಚಿಕ್ಕಪ್ಪನಿಂದ ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

ಪುತ್ತೂರು: 16 ವರ್ಷದ ಅಪ್ರಾಪ್ತೆಯ ಮೇಲೆ ಆಕೆಯ ಚಿಕ್ಕಪ್ಪನೇ ಲೈಂಗಿಕ ಕಿರುಕುಳ ನೀಡುತ್ತಿರುವ ಘಟನೆ ಬೆಳಕಿಗೆ ಬಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ನೆಹರುನಗರ ನಿವಾಸಿ ರಾಜ ಎಂಬವರು ಆರೋಪಿ. ಕಾಸರಗೋಡು ಮೂಲದ ಅಪ್ರಾಪ್ತೆ ಪುತ್ತೂರಿನಲ್ಲಿ ತನ್ನ ಚಿಕ್ಕಪ್ಪನ ಮನೆಯಿಂದ ಶಾಲೆಗೆ ಹೋಗುತ್ತಿದ್ದು ಕಳೆದ ನಾಲ್ಕು ತಿಂಗಳಿನಿಂದ ತನ್ನ ಚಿಕ್ಕಪ್ಪ ಲೈಂಗಿಕ ಕಿರುಕುಳ ನೀಡುತ್ತಿರುವ ಕುರಿತು ತನ್ನ ಪೋಷಕರಿಗೆ ತಿಳಿಸಿದ್ದ ಹಿನ್ನೆಲೆಯಲ್ಲಿ ಪೋಷಕರ ಮೂಲಕ ಆಕೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆಕೆ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿಯ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
185

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು