Categories: ಕರಾವಳಿ

ಜಿಲ್ಲಾಧಿಕಾರಿ ವಾಹನ, ಕಚೇರಿಯ ಚರ ಸೊತ್ತುಗಳ ಜಪ್ತಿಗೆ ನ್ಯಾಯಾಲಯ ಆದೇಶ

ಪುತ್ತೂರು: ಕಬಕ ವಿದ್ಯಾಪುರ ಸರಕಾರಿ ಶಾಲೆಯ ಆವರಣದಲ್ಲಿ 9 ವರ್ಷಗಳ ಹಿಂದೆ ಅಕ್ಷರ ದಾಸೋಹ ಕಟ್ಟಡದ ಲಿಂಟಲ್ ಬಿದ್ದು 9ನೇ ತರಗತಿಯ ಬಾಲಕ ಶಾರುಖ್ ಖಾನ್ ಸಾವನ್ನಪ್ಪಿದ ಪ್ರಕರಣದಲ್ಲಿ ಬಾಲಕನ ಹೆತ್ತವರಿಗೆ ರೂ.5 ಲಕ್ಷ ಪರಿಹಾರ ನೀಡಬೇಕೆಂಬ ನ್ಯಾಯಾಲಯದ ಆದೇಶ ಇನ್ನೂ ಜಾರಿ ಆಗದಿರುವ ಹಿನ್ನೆಲೆಯಲ್ಲಿ ದ.ಕ ಜಿಲ್ಲಾಧಿಕಾರಿಯವರ ವಾಹನ ಮತ್ತು ಕಚೇರಿಯ ಚರ ಸೊತ್ತುಗಳನ್ನು ಜಪ್ತಿ ಮಾಡುವಂತೆ ಪುತ್ತೂರು ಹಿರಿಯ ಪ್ರಧಾನ ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ.

2010 ಮಾ.4 ರಂದು ಕಬಕ ವಿದ್ಯಾಪುರ ಸರಕಾರಿ ಶಾಲೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಅಕ್ಷರ ದಾಸೋಹ ಕಟ್ಟಡದ ಲಿಂಟಲ್ ವಿದ್ಯಾರ್ಥಿ ಶಾರುಖ್ ಖಾನ್ ತಲೆಯ ಮೇಲೆ ಬಿದ್ದು ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಈ ಕುರಿತು ಬಾಲಕನ ತಂದೆ ಅಬ್ದುಲ್ ಖಾದರ್ ಮತ್ತು ತಾಯಿ ತಾಹಿರಾ ಅವರು ಸರಕಾರಿ ಶಾಲೆ ಮತ್ತು ಗುತ್ತಿಗೆದಾರರ ವಿರುದ್ಧ ಪರಿಹಾರ ಕೋರಿ ನ್ಯಾಯಾಲಯದಲ್ಲಿ ವ್ಯಾಜ್ಯ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ಬಾಲಕನ ಹೆತ್ತವರಿಗೆ ಸರಕಾರ ರೂ.5ಲಕ್ಷ ಪರಿಹಾರ ನೀಡುವಂತೆ ಆದೇಶಿಸಿತ್ತು. ಸರಕಾರ ಇದನ್ನು ಪ್ರಶ್ನಿಸಿ ಅಪೀಲು ಹೋಗಿದ್ದರೂ ಅದನ್ನು ನ್ಯಾಯಾಲಯ ತಿರಸ್ಕರಿಸಿ ಪರಿಹಾರ ನೀಡುವಂತೆ ಸೂಚಿಸಿತ್ತು.

ಅರ್ಜಿದಾರರ ಪರ ವಕೀಲರಾದ ಮಂಗಳೂರಿನ ಇಬ್ರಾಹಿಂ ಕೆ.ಎಸ್ ಮತ್ತು ಪುತ್ತೂರಿನ ಅರುಣ್ ಬಿ.ಕೆ ವಾದಿಸಿದ್ದರು.

ಅಮಲ್ಜಾರಿ ಅರ್ಜಿ ಸಲ್ಲಿಕೆ
ನ್ಯಾಯಾಲಯ ತೀರ್ಪು ನೀಡಿ 8 ತಿಂಗಳಾದರೂ ಸರಕಾರದ ಕಡೆಯಿಂದ ಪರಿಹಾರ ಮೊತ್ತ ಬಿಡುಗಡೆ ಆಗದ ಕಾರಣ ಅರ್ಜಿದಾರರು ಅಮಲ್ಜಾರಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ದ.ಕ.ಜಿಲ್ಲಾಧಿಕಾರಿಗಳು ಬಳಸುವ ವಾಹನ ಮತ್ತು ಜಿಲ್ಲಾಧಿಕಾರಿ ಕಚೇರಿಯ ಚರ ಸೊತ್ತುಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.

Desk

Recent Posts

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

6 mins ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

21 mins ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

2 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

3 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

3 hours ago