ಕರಾವಳಿ

ತಲಪಾಡಿಯಲ್ಲಿ ಗಡಿ ನಿರ್ಬಂಧ ವಿರೋಧಿಸಿ ಪ್ರತಿಭಟನೆ

ಮಂಗಳೂರು: ಕೇರಳ ರಾಜ್ಯದಿಂದ ಕರ್ನಾಟಕಕ್ಕೆ ಬರುವ ಜನರಿಗೆ ಪ್ರವೇಶ ನಿರ್ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕೇರಳದ ವಿವಿಧ ಸಂಘಟನೆಗಳ ವತಿಯಿಂದ ಅಂತಾರಾಜ್ಯ ಗಡಿ ಪ್ರದೇಶ ತಲಪಾಡಿಯಲ್ಲಿ ಸೋಮವಾರ ಬೆಳಗ್ಗೆ ಬೃಹತ್ ಪ್ರತಿಭಟನೆ ನಡೆಯಿತು.
ಕಾಸರಗೋಡು ಜಿಲ್ಲಾಧಿಕಾರಿ ಸ್ವಾಗತ್ ಭಂಡಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಪ್ರತಿಭಟನಕಾರರ ಅಹವಾಲು ಸ್ವೀಕರಿಸಿದರು.
ಅಂತಾರಾಜ್ಯ ಪ್ರಯಾಣವನ್ನು ನಿರ್ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನ ಉಲ್ಲಂಘಿಸಿ ಕರ್ನಾಟಕ ಸರ್ಕಾರ ಗಡಿ ಬಂದ್ ನಡೆಸಿ ಉಭಯ ರಾಜ್ಯಗಳ ಗಡಿ ಪ್ರದೇಶದ ಜನರನ್ನು ಸಂಕಷ್ಟದಲ್ಲಿ ಸಿಲುಕಿಸಿದೆ ಎಂದು ಪ್ರತಿಭಟನಕಾರರು ಕೋವಿಡ್ ಲಸಿಕೆ ವರದಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಸದಸ್ಯ ಹರ್ಷಾದ್ ವರ್ಕಾಡಿ, ಹಿಂದೆ ಗಡಿ ಬಂದ್ ಸಂದರ್ಭ ನಾವು ಸಹಕರಿಸಿದ್ದೇವೆ. ಆದರೆ ಕೇಂದ್ರ ಸರ್ಕಾರವೇ ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗೆ ಅಂತಾರಾಜ್ಯ ಪ್ರಯಾಣ ನಿರ್ಬಂಧಿಸುವಂತಿಲ್ಲ ಎಂದು ಹೇಳಿದೆ. ಆದ್ದರಿಂದ ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೆಯೇ ಕರ್ನಾಟಕ ಪ್ರವೇಶಕ್ಕೆ ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿದರು.

Indresh KC

Recent Posts

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

7 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

13 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

26 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

30 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

45 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

1 hour ago