Categories: ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ಸಾವಿರ ದಾಟಿದ ಕೊರೊನಾ ಸೋಂಕು

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಸೋಮವಾರ 233 ಮಂದಿಗೆ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20367ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿಗೆ ಸೋಮವಾರ ಎಂಟು ಮಂದಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಮೃತರ ಸಂಖ್ಯೆ 490ಕ್ಕೆ ಏರಿಕೆಯಾಗಿದೆ.

ಮಂಗಳೂರು ತಾಲೂಕಿನ 122, ಬಂಟ್ವಾಳದ 53, ಪುತ್ತೂರಿನ 6, ಸುಳ್ಯದ 5, ಬೆಳ್ತಂಗಡಿಯ 10 ಮತ್ತು ಇತರ ಜಿಲ್ಲೆಗಳಲ್ಲಿ 37 ಮಂದಿಗೆ ಸೋಮವಾರ ಕೊರೊನಾ ದೃಢಪಟ್ಟಿದೆ.

ಅವರಲ್ಲಿ 78 ಮಂದಿಗೆ ಸೋಂಕಿತರ ಸಂಪರ್ಕದಿಂದ, 105 ಮಂದಿಗೆ ಇನ್ಪುಯೆಂಜಾ ಲೈಕ್‍ಇಲ್‍ನೆಸ್ ಕಂಡುಬಂದಿದ್ದು, 9 ಮಂದಿಗೆ ಉಸಿರಾಟ ಸಮಸ್ಯೆಯಿಂದ ಚಿಕಿತ್ಸೆಗೆ ತೆರಳಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಸೋಮವಾರ 404 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಮನೆಗಳಿಂದ 219 ಮತ್ತು ಆಸ್ಪತ್ರೆಗಳಿಂದ 185 ಮಂದಿ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಒಟ್ಟು 15,505 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. 4371 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ.

Desk

Recent Posts

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

7 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

10 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

25 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

40 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

48 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 hour ago