News Karnataka Kannada
Wednesday, May 08 2024
ಕರಾವಳಿ

ದಕ್ಷಿಣ ಕನ್ನಡ; ಬ್ಲ್ಯಾಕ್ ಫಂಗಸ್ ಕೇಸ್ ಏರಿಕೆ, ಒಂದೇ ದಿನ 3 ಸಾವು

Photo Credit :

ದಕ್ಷಿಣ ಕನ್ನಡ; ಬ್ಲ್ಯಾಕ್ ಫಂಗಸ್ ಕೇಸ್ ಏರಿಕೆ, ಒಂದೇ ದಿನ 3 ಸಾವು

ಮಂಗಳೂರು, ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದ ನಡುವೆಯೇ ಬ್ಲ್ಯಾಕ್ ಫಂಗಸ್ ಪ್ರಕರಣ ಏರುತ್ತಿದೆ. ಗುರುವಾರ ಒಂದೇ ದಿನ ಸೋಂಕಿಗೆ ಮೂರು ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂತ ಗ್ರಾಮದ ಅಳಕೆ ನಿವಾಸಿ ನೋಣಯ್ಯ ಪೂಜಾರಿ (55) ಸೇರಿದಂತೆ ದಾವಣಗೆರೆ ಮತ್ತು ಚಿಕ್ಕಮಗಳೂರು ಮೂಲದ ಇಬ್ಬರು ರೋಗಿಗಳು ಬ್ಲ್ಯಾಕ್ ಫಂಗಸ್‌ನಿಂದಾಗಿ ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿಯ ನೋಣಯ್ಯ ಪೂಜಾರಿ ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದರು. ಆನಂತರ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದೇ ವೇಳೆ ಬ್ಲ್ಯಾಕ್ ಫಂಗಸ್ ಲಕ್ಷಣ ಕಾಣಿಸಿಕೊಂಡಿದ್ದು, ಕಣ್ಣಿನ ಆಪರೇಷನ್ ಸಹ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 5 ಮಂದಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಹೊಸತಾಗಿ ಮತ್ತೆ 5 ಪ್ರಕರಣಗಳು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 25 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದ್ದು,ಈ ವರಗೆ ಜಿಲ್ಲೆಯಲ್ಲಿ 30 ಪ್ರಕರಣಗಳು ಪತ್ತೆಯಾಗಿದೆ.
ಇವುಗಳಲ್ಲಿ 8 ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ್ದಾಗಿದ್ದರೆ, 22 ಪ್ರಕರಣಗಳು ಹೊರ ಜಿಲ್ಲೆಗೆ ಸೇರಿದ್ದಾಗಿದೆ. ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಮಂಗಳೂರಿನ ಸರ್ಕಾರಿ ವೆನ್ಲಾಕ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು