News Karnataka Kannada
Tuesday, April 30 2024
ಮಂಗಳೂರು

ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

Rain Karavali Main 10072021
Photo Credit :

ಮಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದೆ. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜುಲೈ 11ರಿಂದ 13ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೂರೂ ದಿನ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ.

‌ಕರಾವಳಿಯ ಜಿಲ್ಲೆಗಳಲ್ಲಿ ಶನಿವಾರವೂ ಹೆಚ್ಚು ಮಳೆಯಾಗಲಿದೆ. ಈ ಭಾಗದಲ್ಲಿ ಗಂಟೆಗೆ ಗರಿಷ್ಠ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು’ ಎಂದು ’ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ರಾಜ್ಯದ ಯಾದಗಿರಿ, ವಿಜಯಪುರ, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜು.10ರಿಂದ 13ರವರೆಗೆ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ’.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು