ಉಡುಪಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನ ಮೀಲಾದುನ್ನಬಿ ಆಚರಣೆ ನವೆಂಬರ್ 20ರಂದು ನಡೆಯಲಿದ್ದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ನಗರಾಭಿವೃದ್ಧಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಆದೇಶವನ್ನು ಹೊರಡಿಸಿದ್ದಾರೆ.
ಮೀಲಾದ್ ಸರ್ಕಾರಿ ರಜೆ ನವೆಂಬರ್ 21 ರಂದು ನಿಗದಿಯಾಗಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಲಾದ್ 20ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನ.21 ರಂದು ಎಂದಿನಂತೆ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲು ಆದೇಶ ನೀಡಲಾಗಿದೆ.