ನಾರಾಯಣ ಗುರು ಸಂಘ ಎಲ್ಲಾ ಸಮಾಜದವರಿಗೂ ಪ್ರಯೋಜನ ನೀಡಿದೆ : ಸೋಲೂರು ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮಿ

ಬೆಳ್ತಂಗಡಿ : ನಾರಾಯಣ ಗುರುಗಳ ಸಂಕಲ್ಪದಂತೆ ಈ ಸಮಾಜ ಬೆಳೆಯಬೇಕು. ಬೆಳ್ತಂಗಡಿಯ ನಾರಾಯಣ ಗುರು ಸಂಘ ಎಲ್ಲಾ ಸಮಾಜದವರಿಗೂ ಪ್ರಯೋಜನ ನೀಡಿದೆ. ಈ ಸಂಘದ ಮೂಲಕ ಹೆಚ್ಚಿನ ವಿದ್ಯಾಸಂಸ್ಥೆಗಳು ಮೂಡಿ ಬಂದು ಸಮಾಜಕ್ಕೆ ಅನುಕೂಲವಾಗಲಿ ಎಂದು ಸೋಲೂರು ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮಿ ಹೇಳಿದರು.

ಅವರು ಸೋಮವಾರ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ, ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ನೂತನ ಬಿಂಬ ಪ್ರತಿಷ್ಠೆ ಹಾಗೂ167ನೇ ಜನ್ಮ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿ, ಸಂಘದ ಗೌರವಾಧ್ಯಕ್ಷ, ಮಾಜಿ ಶಾಸಕ ಕೆ ವಸಂತ ಬಂಗೇರ ಮಾತನಾಡಿ, ‘ಬಿಲ್ಲವ ಸಮುದಾಯ ಸಮಾಜದಲ್ಲಿರುವ ಅವಕಾಶಗಳನ್ನುಬಳಸಿಕೊಂಡು ಸಶಕ್ತ ಸಮಾಜವಾಗಿ ಬೆಳೆಯಬೇಕು. ಅವಿಭಜಿತ ದಕ್ಷಿಣ ಕನ್ನಡಜಿಲ್ಲೆಯಲ್ಲಿ ಸಂಖ್ಯೆಯಲ್ಲಿ ಹೆಚ್ಚಿರುವಂತೆ ಸಂಘಟನಾತ್ಮಕವಾಗಿಯೂ ಬಲಶಾಲಿಯಾಗಿರಬೇಕು ಎಂದರು.

ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಮಾತನಾಡಿ,’ ಬಿಲ್ಲವ ಸಮಾಜದಲ್ಲಿ ನಾರಾಯಣ ಗುರುಗಳ ತತ್ವ ಸಂದೇಶಗಳು ಹೆಜ್ಜೆ ಹೆಜ್ಜೆಗೂ ಪಾಲನೆಯಾಗಬೇಕು. ಸಂಘಟನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಎಲ್ಲಾ ಕ್ಷೇತ್ರಗಳಲ್ಲೂಬಲಶಾಲಿಯಾಗಿಸುವ ಕೆಲಸ ಮಾಡಬೇಕು. ಸಂಘಟನೆಯನ್ನು ಒಡೆಯುವಕೆಲಸಕ್ಕೆ ಯಾರೂ ಕೈ ಹಾಕಬಾರದು’ ಎಂದರು.

ದ್ವಿತೀಯ ಪಿಯುಸಿಯಲ್ಲಿ ಶೇ. 100 ಅಂಕ ಗಳಿಸಿದ ವಿದ್ಯಾರ್ಥಿಗಳಾದ ಸಮೀಕ್ಷಾಮತ್ತು ಜ್ಯೋತಿಕಾ, ಎಸ್ಸೆಸ್ಸೆಲ್ಸಿಯಲ್ಲಿ 621 ಅಂಕ ಗಳಿಸಿದ ಸುಶಾಂತ್, ಗೌರವ್, ಕವನ, 619 ಅಂಕ ಗಳಿಸಿದ ಸೃಷ್ಟಿ ಹಾಗೂ ನೇಹಲ್ ಇವರನ್ನುಸನ್ಮಾನಿಸಲಾಯಿತು. ಸಮಾಜದ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಲ್ಲಿ ಸೋಲೂರು ಮಠಸದಾ ಇದೆ. ಐಎಎಸ್, ಕೆ.ಎ.ಎಸ್. ಕಲಿಯುವಂತಹ ವಿದ್ಯಾರ್ಥಿಗಳಿಗೂ ಇಲ್ಲಿ ಅವಕಾಶವಿದೆ ಎಂದು ಶ್ರೀ ವಿಖ್ಯಾತನಂದ ಸ್ವಾಮಿ ಹೇಳಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಹಿಳಾ ಬಿಲ್ಲವವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್ ಇದ್ದರು.ನಾರಾಯಣ ಗುರುಗಳ ಬಿಂಬ ಪ್ರತಿಷ್ಠೆಯಲ್ಲಿ ವಿಶೇಷ ಕೊಡುಗೆ ನೀಡಿದ ನಾರಾಯಣ ಸುವರ್ಣ, ಯಶೋಧರ ಮತ್ತು ಯಶೋಧ ಕುತ್ಲೂರು, ವೈವಾಹಿಕಜೀವನದ 50ನೇ ವರ್ಷಕ್ಕಾಗಿ ಸಂಘದ ಮಾಜಿ ಅಧ್ಯಕ್ಷ ವಸಂತ ಸಾಲಿಯಾನ್ ದಂಪತಿಗಳನ್ನು ಗೌರವಿಸಲಾಯಿತು.

Raksha Deshpande

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

18 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

19 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

23 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

34 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

39 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

54 mins ago