ಉಡುಪಿ: ರೈಲು ಹಳಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಯುವತಿಯೊಬ್ಬಳ ಶವವು ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮಣಿಪಾಲದಿಂದ ಸುಮಾರು ಒಂದುವರೆ ಕಿ.ಮೀ. ದೂರದಲ್ಲಿರುವ ಸಗ್ರಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ಸಂಜೆ ವೇಳೆ ಯುವತಿಯ ಶವ ಪತ್ತೆಯಾಗಿದ್ದು, ಅತ್ಯಾಚರವೆಸಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಯುವತಿಯ ಬಟ್ಟೆ ಬರೆಗಳನ್ನು ನೋಡಿದರೆ ಕೂಲಿ ಕೆಲಸ ಮಾಡಿಕೊಂಡಿದ್ದಳು ಎಂದು ತಿಳಿಯುತ್ತದೆ. ಈಕೆಯ ವಯಸ್ಸು ಸುಮಾರು 18-25 ವರ್ಷ ವಯಸ್ಸಿನವಳಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ ಪಿ ನಿಶಾ ಜೇಮ್ಸ್ ಸಹಿತ ಹಿರಿಯ ಅಧಿಕಾರಿಗಳು ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.