News Karnataka Kannada
Friday, May 03 2024
ಕರಾವಳಿ

ನೆಗೆಟಿವ್‌ ವರದಿಯೊಂದಿಗೆ ಬಂದಿದ್ದ ಕೇರಳದ 228 ವಿದ್ಯಾರ್ಥಿಗಳಿಗೆ ಪಾಸಿಟಿವ್‌

Ita Covid19 Mng 06082021
Photo Credit :

ಮಂಗಳೂರು, : ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಇದೀಗ ದ.ಕ.ಜಿಲ್ಲೆಗೆ ಕೋವಿಡ್ ನೆಗೆಟಿವ್ ವರದಿಯೊಂದಿಗೆ ಬಂದಿದ್ದ ಕೇರಳದ 228 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿರುವುದು ಭೀತಿಗೆ ಕಾರಣವಾಗಿದೆ.
ದ.ಕ.ಜಿಲ್ಲೆಯಲ್ಲಿನ ವಿವಿಧ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 228 ಮಂದಿ ಕೇರಳದ ವಿದ್ಯಾರ್ಥಿಗಳಿಗೆ ಕಳೆದ 10 ದಿನಗಳ ಒಳಗೆ ಸೋಂಕು ಕಾಣಿಸಿಕೊಂಡಿದೆ.
ಪರೀಕ್ಷೆ ನಿಮಿತ್ತ ನೆಗೆಟಿವ್ ವರದಿಯೊಂದಿಗೆ ಜಿಲ್ಲೆಗೆ ವಿದ್ಯಾರ್ಥಿಗಳು ಆಗಮಿಸಿದ್ದರು. ಆದರೆ, ಇಲ್ಲಿ ಆರ್​​ಟಿಪಿಸಿಆರ್ ತಪಾಸಣೆ ಮಾಡಲಾಗಿದ್ದು, ವರದಿಯಲ್ಲಿ ಕೇರಳದ 228 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಅವರಿಗೆ ಪ್ರತ್ಯೇಕ ಕ್ವಾರೆಂಟೈನ್ ವ್ಯವಸ್ಥೆ ಮಾಡಲಾಗಿದೆ ಎಂದು ಡಿಎಚ್ಒ ಡಾ.ಕಿಶೋರ್ ಕುಮಾರ್ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು