News Karnataka Kannada
Monday, May 06 2024
ಕರಾವಳಿ

ಪಾಕಿಸ್ಥಾನ ಪ್ರೇಮಿ ಸಿದ್ದರಾಮಯ್ಯ ಎಂದು ಆರೋಪಿಸಿದ ಬಿಜೆಪಿ

Siddaramaiah Bang 17 6 21 No 176218 Newsk 3471785224
Photo Credit :

ಬೆಂಗಳೂರು: ಪಾಕಿಸ್ತಾನ ಸೈನಿಕರಿಂದ ಭಾರತೀಯ ಸೈನಿಕರ ಸಾವು ಬಯಸುವ ವ್ಯಕ್ತಿಗಳನ್ನು ಬೆಂಬಲಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸುವ ಮೂಲಕ ಕರ್ನಾಟಕ ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಡೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.
ಕಾಂಗ್ರೆಸ್ ಕಾರ್ಯಕರ್ತರಾಗಲು ದೇಶ, ಸೈನಿಕರ ವಿರುದ್ಧದ ನಿಲುವು ಹೊಂದಿರುವುದು ಕಡ್ಡಾಯವೇ? ಪಾಕಿಸ್ತಾನ ಸೈನಿಕರು ನಮ್ಮ ಸೈನಿಕರನ್ನು ಕೊಲ್ಲಲಿ ಎಂದ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಕಾನೂನು ಕ್ರಮವನ್ನು ಕಾಂಗ್ರೆಸ್ ಖಂಡಿಸುತ್ತಿದೆ. ಈ ಮೂಲಕ ಪಾಕ್ ಮೇಲಿನ ತಮ್ಮ ನಿಷ್ಠೆಯನ್ನು ಕಾಂಗ್ರೆಸ್ ನಾಯಕರು ಸಾಬೀತುಪಡಿಸಿದ್ದಾರೆ ಎಂದು ಬಿಜೆಪಿ ಟ್ವೀಟ್‌ ಮೂಲಕ ಖಂಡಿಸಿದೆ. ಸಿದ್ದರಾಮಯ್ಯ ಅವರ ಪಾಕಿಸ್ಥಾನ ಪ್ರೇಮ ಈ ಹಿಂದೆಯೇ ಪ್ರಕಟವಾಗಿತ್ತು. ಪಾಕಿಸ್ತಾನವನ್ನು ಪ್ರೇಮಿಸುವ ಸಮಾಜಘಾತುಕ ಸಂಘಟನೆಗಳ ಕೇಸ್ ಹಿಂಪಡೆದಿದ್ದರು. ಈಗ ಶತ್ರುರಾಷ್ಟ್ರ ಪಾಕಿಸ್ಥಾನದ ಪರವಾಗಿ ಬರೆದ ವ್ಯಕ್ತಿಯ ವಿರುದ್ಧ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು ತೋರ್ಪಡಿಸುತ್ತಿರುವ ಕಾಳಜಿ ದೇಶದ ಹಿತಾಸಕ್ತಿಗೆ ಮಾರಕವಾದದ್ದು.
ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಕೂಡ ಟ್ವೀಟ್‌ ಮೂಲಕ ಸಿದ್ದರಾಮಯ್ಯ ನಿಲುವನ್ನು ಖಂಡಿಸಿದ್ದಾರೆ. ಈ ಹಿಂದೆ ಗೋ ಕಳ್ಳರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಈಗ ಪಾಕಿಸ್ಥಾನ ಪ್ರೇಮಿಯ ಪರ ನಿಂತಿದ್ದಾರೆ. ಕಾಂಗ್ರೆಸ್ ನಾಯಕರ ಒಲವು, ನಿಲುವುಗಳೆಲ್ಲ ದೇಶದ ವಿರುದ್ಧವಾಗಿರುವವರ ಪರವಾಗಿರುತ್ತದೆ. ಸೈನಿಕರ ಸಾವು ಬಯಸುವ ವ್ಯಕ್ತಿಯನ್ನು ಅಮಾಯಕ ಎಂದು ಬಿಂಬಿಸುವ ಏಕೈಕ ಪಕ್ಷವೊಂದಿದ್ದರೆ, ಅದು ಕಾಂಗ್ರೆಸ್ ಮಾತ್ರ ದೇಶದ್ರೋಹ ಎಂದರೇನು ಎಂದು ಶ್ರೀ ಸಿದ್ದರಾಮಯ್ಯರಿಂದ ಪ್ರತ್ಯೇಕವಾಗಿ ಕೇಳಬೇಕಿಲ್ಲ. ಅವರು ಸಿಎಂ ಆಗಿದ್ದಾಗ ದೇಶದ್ರೋಹದ ಹೇಳಿಕೆ ಕೊಡುವಂತವರನ್ನು ಜೊತೆಯಲ್ಲಿಟ್ಟುಕೊಂಡೆ ಕೆಲಸ ಮಾಡಿದವರು. ಅದು ನಿಮ್ಮ ಕಾಲ. ಸೈನಿಕರು, ಸೈನ್ಯದ ಬಗ್ಗೆ ದೇಶದ್ರೋಹದ ಹೇಳಿಕೆ ನೀಡಿದ್ದ ವ್ಯಕ್ತಿಯನ್ನು ಈಗ ಕಾರ್ಕಳದಲ್ಲಿ ಪೊಲೀಸ್ ಬಂಧಿಸಿದೆ. ಅತ್ತಂತೆ ನಟಿಸುವವರ ಸಮರ್ಥನೆಗೆ ನೀವು ಬೇಗ ಬರುತ್ತಿರಿ. ಕೆಜೆ ಹಳ್ಳಿ ಗಲಭೆ, ಮಂಗಳೂರು ಗಲಭೆ, ಬೆಂಗಳೂರಿನ ಗೌರಿಪಾಳ್ಯದಲ್ಲಿ ವೈದ್ಯರ ಮೇಲೆ ಹಲ್ಲೆ, ಹಿಂದು ಕಾರ್ಯಕರ್ತರ ಕಗ್ಗೊಲೆ, ಕೊಲೆಗಡುಕ ಎಸ್ ಡಿ ಪಿಐ, ಪಿಎಫ್ ಐ ಸಂಘಟನೆಯನ್ನು ನೀವು ಸಮರ್ಥನೆ ಮಾಡಿಕೊಳ್ಳುತ್ತೀರಿ ಎಂದು ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು