ಪಿಎಚ್‌ಡಿ ವಿದ್ಯಾರ್ಥಿನಿಯಿಂದ ಲಂಚ ಸ್ವೀಕಾರ ಆರೋಪ: ಪ್ರೊ.ಡಾ ಅನಿತಾಗೆ ಶಿಕ್ಷೆ

ಮಂಗಳೂರು: ಲಂಚ ಸ್ವೀಕಾರ ಆರೋಪ ಸಾಬೀತಾದ ಹಿನ್ನೆಲೆ ಕೊಣಾಜೆಯ ಮಂಗಳೂರು ವಿಶ್ವ ವಿದ್ಯಾಲಯದ ಸಮಾಜ ಶಾಸ್ತ್ರದ ಸಹಾಯಕ ಪ್ರೊಪೆಸರ್ ಡಾ.ಅನಿತಾ ರವಿಶಂಕರ್‌ಗೆ ಐದು ವರ್ಷ ಶಿಕ್ಷೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

2012ರ ಡಿಸೆಂಬರ್ 4ರಂದು ಪಿ.ಹೆಚ್.ಡಿ. ವಿದ್ಯಾರ್ಥಿನಿ ಪ್ರೇಮ ಡಿ’ಸೋಜ ಎಂಬವರಿಂದ ಅವರ ಪ್ರಭಂದ ಅಂಗೀಕಾರ ಆಗಬೇಕಾದರೆ ಮೈಸೂರಿನಿಂದ ಬರುವ ಬಾಹ್ಯ ಪರಿವೀಕ್ಷಕರ ಖರ್ಚಿನ ಬಾಬ್ತು ರೂ. 16,800/- ಲಂಚದ ಹಣಕ್ಕೆ ಬೇಡಿಕೆ ಇಟ್ಟು ಮುಂಗಡ ಹಣ ರೂ. 5,000/- ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ದಾಳಿ ಮಾಡಿ ಪ್ರಸ್ತುತ ಕೊಣಾಜೆ ಮಂಗಳೂರು ಯುನಿವರ್ಸಿಟಿಯ ಸಮಾಜ ಶಾಸ್ತ್ರದ ಸಹಾಯಕ ಪ್ರೊಪೆಸರ್ ಆಗಿರುವ ಡಾ. ಅನಿತಾ ರವಿಶಂಕರ್ ರವರನ್ನು ಬಂಧಿಸಿದ್ದರು.

ಸದ್ರಿ ಆರೋಪಿ ಮೊದಲು ರೂ. 10,000/-, ನಂತರ ರೂ 4,000/- ಮತ್ತು ತದನಂತರ ರೂ. 16,800/- ಕ್ಕೆ ಪಿರ್ಯಾದಿಯ ಬಳಿ ಬೇಡಿಕೆ ಇಟ್ಟಿದ್ದಳು ಎಂದು ಆರೋಪಿಸಲಾಗಿತ್ತು. ಲೋಕಾಯುಕ್ತ ಸಂಸ್ಥೆಯ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆಗೆ ಒಳಪಡಿಸಲಾಗಿತ್ತು. ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಭೀತಾಗಿದೆ ಎಂದು ತೀರ್ಮಾನಕ್ಕೆ ಬಂದ ಹಿನ್ನಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 7 ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ 2 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ. ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 3 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ.ಆರೋಪಿ ದಂಡ ತೆರಲು ತಪ್ಪಿದಲ್ಲಿ ತಲಾ ಒಂದು ತಿಂಗಳುಗಳ ಸಾದಾ ಸಜೆ ಅನುಭವಿಸಬೇಕೆಂದು ಶುಕ್ರವಾರ ನ್ಯಾಯಾಲಯ ಆದೇಶಿಸಿದೆ. ಆದರೆ ಎರಡೂ ಅಪರಾಧಕ್ಕೆ ಸಂಬಂಧಿಸಿದ ಶಿಕ್ಷೆಗಳನ್ನು ಅಪರಾಧಿ ಜೊತೆಯಾಗಿ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ಉಮೇಶ್ ಜಿ. ಶೇಟ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.

Sampriya YK

Recent Posts

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

2 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

4 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

15 mins ago

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​…

19 mins ago

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

30 mins ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

1 hour ago