News Karnataka Kannada
Monday, May 20 2024
ಕರಾವಳಿ

ಪ್ರತಿಯೊಬ್ಬರು ಸ್ವಚ್ಛತೆ ಬಗ್ಗೆ ಸಂಕಲ್ಪ ತೊಡಗಬೇಕು: ಕೋಟ ಶ್ರೀನಿವಾಸ ಪೂಜಾರಿ

Photo Credit :

ಪ್ರತಿಯೊಬ್ಬರು ಸ್ವಚ್ಛತೆ ಬಗ್ಗೆ ಸಂಕಲ್ಪ ತೊಡಗಬೇಕು: ಕೋಟ ಶ್ರೀನಿವಾಸ ಪೂಜಾರಿ

ಬಂಟ್ವಾಳ: ಪ್ರತಿಯೊಬ್ಬರೂ ಸ್ವಚ್ಛತೆಯ ಬಗ್ಗೆ ಸಂಕಲ್ಪ ಕೈಗೊಂಡಾಗ ಮಾತ್ರ ನಿಜ ಅರ್ಥದ ಸ್ವಚ್ಛತಾ ಕಾರ್ಯಕ್ರಮ ಅನುಷ್ಠಾನವಾಗುತ್ತದೆ. ಸ್ವಚ್ಚತೆಯನ್ನು ಕಾಪಾಡುವ ನಿಟ್ಟಿನಲ್ಲಿ ಬೇಕಾದ ಯೋಜನೆಯನ್ನು ಸರಕಾರ ರೂಪಿಸಿದ್ದು, ಜನಸಾಮಾನ್ಯರು ಸಹಕರಿಸಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಶುಕ್ರವಾರ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಬಂಟ್ವಾಳ ತಾಲೂಕು ಪಂಚಾಯಿತಿ, ಅನಂತಾಡಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಅನಂತಾಡಿ ಗ್ರಾ.ಪಂ. ನ ಆರಂಗಳದಲ್ಲಿ ನಿರ್ಮಾಣಗೊಂಡ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕ ಶೌಚಾಲಯ ಶಂಕುಸ್ಥಾಪನೆ ನಡೆಸಿದ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಮಾತನಾಡಿ ಬೆಳೆಯುತ್ತಿರುವ ಜಗತ್ತಿನಲ್ಲಿ ಸ್ವಚ್ಛತೆಗೆ ಬಹಳಷ್ಟು ಒತ್ತು ಕೊಡುವ ಅಗತ್ಯವಿದೆ. ಆಹಾರ ಹಾಗೂ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಅಗತ್ಯವಿದೆ. ಒಳ್ಳೆಯ ವಿಷಯಕ್ಕೆ ವ್ಯವಸ್ಥೆಯನ್ನು ಬಳಸಿಕೊಳ್ಳುವ ಕಾರ್ಯವಾಗಬೇಕು ಎಂದು ತಿಳಿಸಿದರು.

ಸ್ವಚ್ಛೋತ್ಸವ – ನಿತ್ಯೋತ್ಸವ ಮಾಸಾಚರಣೆಯ ವಸ್ತುಪ್ರದರ್ಶನವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಘಾಟಿಸಿದರು. ಘನತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಚಾಲನೆ ನೀಡಿದರು. ಕಾಮಗಾರಿಗೆ ಸಹಕಾರ ನೀಡಿದ ವ್ಯಕ್ತಿಗಳನ್ನು ಗೌರವಿಸಲಾಯಿತು. ಕಸ ಸಂಗ್ರಹಣೆಯ ಬುಟ್ಟಿಗಳ ವಿತರಣೆ ನಡೆಯಿತು.

ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಕಂಬಳಿ, ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಗೀತಾ ಮಲ್ಲಿಕಾ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಂಜುಳಾ ಮಾವೆ, ಕಮಲಾಕ್ಷಿ, ಅನಂತಾಡಿ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಸನತ್ ಕುಮಾರ ರೈ, ಉಪಾಧ್ಯಕ್ಷೆ ಕವಿತಾ, ಸುಲೋಚನಾ ಭಟ್ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಆನಂದ ಕುಮಾರ್ ಪ್ರಸ್ತಾವನೆಗೈದರು. ಅನಂತಾಡಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಪ್ರವೀಣ್ ಜೋಷಿ ವಂದಿಸಿದರು. ನೆರವು ಘಟಕ ಎಚ್ಆರ್ಡಿ ನವೀನ್, ಡೊಂಬಯ್ಯ ಇಡ್ಕಿದು ಕಾರ್ಯಕ್ರಮ ನಿರೂಪಿಸಿದರು. ಪಿಡಿಒ ಜಯರಾಮ ಕೆ. ಸಹಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು